ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಏಕದಿನದಲ್ಲಿ 200 ಸಿಕ್ಸರ್ ಸಿಡಿಸಿದ ಏಕೈಕ ಭಾರತೀಯ ಎಂಎಸ್ ಧೋನಿ

ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಏಕದಿನ ಮಾದರಿಯಲ್ಲಿ 200 ಸಿಕ್ಸರ್ ಸಿಡಿಸಿದ ಸಾಧನೆ ಮಾಡಿದ್ದಾರೆ...

ಎಂಎಸ್ ಧೋನಿ
Vishwanath S
Updated On : 1 Jul 2017, 10:25 am
ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಏಕದಿನ ಮಾದರಿಯಲ್ಲಿ 200 ಸಿಕ್ಸರ್ ಸಿಡಿಸಿದ ಸಾಧನೆ ಮಾಡಿದ್ದಾರೆ. 
ಧೋನಿ ಟೀಂ ಇಂಡಿಯಾ ಪರ 294 ಪಂದ್ಯಗಳನ್ನು ಆಡಿದ್ದಾರೆ. ಅದರಲ್ಲಿ 208 ಸಿಕ್ಸರ್ ಸಿಡಿಸಿರುವ ಮೂಲಕ ಏಕದಿನ ಪಂದ್ಯದಲ್ಲಿ ಭಾರತ ಪರ ಅತೀ ಹೆಚ್ಚು ಸಿಕ್ಸರ್ ಬಾರಿಸಿದ ಏಕೈಕ ಬ್ಯಾಟ್ಸ್ ಮನ್ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. 
ಏಕದಿನ ಪಂದ್ಯ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಸಾಧನೆ ಪಾಕಿಸ್ತಾನದ ಬ್ಯಾಟ್ಸ್ ಮನ್ ಶಾಹೀದ್ ಆಫ್ರಿದಿ ಹೆಸರಿನಲ್ಲಿದೆ. 398 ಪಂದ್ಯಗಳಲ್ಲಿ 351 ಸಿಕ್ಸರ್ ಬಾರಿಸುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ. ಇನ್ನು 270 ಸಿಕ್ಸರ್ ಬಾರಿಸಿರುವ ಸನತ್ ಜಯಸೂರ್ಯ ಎರಡನೇ ಸ್ಥಾನ ಮತ್ತು ಸ್ಫೋಟಕ ಬ್ಯಾಟ್ಸ್ ಮನ್ ವೆಸ್ಟ್ ಇಂಡೀಸ್ ನ ಕ್ರಿಸ್ ಗೇಯ್ಲ್ 238 ಸಿಕ್ಸರ್ ಸಿಡಿಸುವ ಮೂಲಕ ನಾಲ್ಕನೇ ಸ್ಥಾನದಲ್ಲಿದ್ದಾರೆ. ಧೋನಿ 208 ಸಿಕ್ಸರ್ ಮೂಲಕ ನಾಲ್ಕನೇ ಸ್ಥಾನದಲ್ಲಿದ್ದಾರೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement