ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಕೋಚ್ ದ್ರಾವಿಡ್‌ಗೆ ಶೇ.100ರಷ್ಟು ವೇತನ ಹೆಚ್ಚಳ: ವಾರ್ಷಿಕ 5 ಕೋಟಿಗೆ ಏರಿಕೆ

ಟೀಂ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಮುಂದಿನ ಎರಡು ವರ್ಷದವರೆಗೆ ಟೀಂ ಇಂಡಿಯಾ 'ಎ' ಹಾಗೂ ಅಂಡರ್ 19 ತಂಡಕ್ಕೂ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.

ರಾಹುಲ್ ದ್ರಾವಿಡ್
Vishwanath S
Updated On : 1 Jul 2017, 11:44 am
ಚೆನ್ನೈ: ಟೀಂ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಮುಂದಿನ ಎರಡು ವರ್ಷದವರೆಗೆ ಭಾರತ 'ಎ' ಹಾಗೂ ಅಂಡರ್ 19 ತಂಡಕ್ಕೂ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. 
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ದ್ರಾವಿಡ್ ಕೋಡ್ ಆಗಿ ಮುಂದುವರಿಕೆಗೆ ಅಧಿಕೃತ ಮುದ್ರೆ ಒತ್ತಿದೆ. ಇನ್ನು ದ್ರಾವಿಡ್ ರವರಿಗೆ ಶೇಖಡ 100ರಷ್ಟು ವೇತನ ಹೆಚ್ಚಳ ಮಾಡಿದ್ದು ವಾರ್ಷಿಕ 5 ಕೋಟಿ ವೇತನ ಪಡೆಯಲಿದ್ದಾರೆ. 
2015 ರಲ್ಲಿ ಟೀಂ ಇಂಡಿಯಾ 'ಎ' ಹಾಗೂ ಅಂಡರ್ 19 ತಂಡಕ್ಕೂ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕಗೊಂಡಿದ್ದರು. ಈಗ ಅವರನ್ನು ಮತ್ತೆ ಎರಡು ವರ್ಷ ಮುಂದುವರೆಸುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಕ್ರಿಕೆಟ್ ಸಲಹಾ ಸಮಿತಿ(ಸಿಎಸಿ) ಪ್ರಸ್ತಾವನೆಗೆ ಬಿಸಿಸಿಐ ಒಪ್ಪಿಗೆ ಸೂಚಿಸಿತ್ತು.

Advertisement

Advertisement

ದ್ರಾವಿಡ್ ಮಾರ್ಗದರ್ಶನದಲ್ಲಿ ಭಾರತೀಯ ಕ್ರಿಕೆಟ್ ತಂಡದ ಎ ವಿಭಾಗ ಆಸ್ಟ್ರೇಲಿಯಾದಲ್ಲಿ ನಡೆದ ತ್ರಿಕೋನ ಸರಣಿಯಲ್ಲಿ ಜಯಗಳಿಸಿತ್ತು. ಅಷ್ಟೇ ಅಲ್ಲದೇ ಯು-19 ತಂಡ ಸಹ ದ್ರಾವಿಡ್ ಮಾರ್ಗದರ್ಶನದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು, ಅವರ ಸೇವೆಯನ್ನು ಮತ್ತೆ ಎರಡು ವರ್ಷಗಳು ಪಡೆಯಲು ಬಯಸುತ್ತೇವೆ ಎಂದು ಬಿಸಿಸಿಐ ತಿಳಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments