ಬಿಸಿಸಿಐ ಆಜೀವ ನಿಷೇಧ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಶ್ರೀಶಾಂತ್
2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಸಂಬಂಧ ಬಿಸಿಸಿಐನಿಂದ ಆಜೀವ ನಿಷೇಧಕ್ಕೊಳಗಾಗಿರುವ ಶ್ರೀಶಾಂತ್ ಸ್ಕಾಟ್ಲೆಂಡ್ ಕ್ರಿಕೆಟ್ ಲೀಗ್ ನಲ್ಲಿ ಆಡಲು ತಮಗೆ...
ಕೊಚ್ಚಿ: 2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಸಂಬಂಧ ಬಿಸಿಸಿಐನಿಂದ ಆಜೀವ ನಿಷೇಧಕ್ಕೊಳಗಾಗಿರುವ ಶ್ರೀಶಾಂತ್ ಸ್ಕಾಟ್ಲೆಂಡ್ ಕ್ರಿಕೆಟ್ ಲೀಗ್ ನಲ್ಲಿ ಆಡಲು ತಮಗೆ ಅಗತ್ಯವಿರುವ ನಿರಾಕ್ಷೇಪಣಾ ಪತ್ರವನ್ನು(ಎನ್ಒಸಿ) ನೀಡುವಂತೆ ಬಿಸಿಸಿಐಗೆ ಸೂಚಿಸಬೇಕೆಂದು ಕೇರಳ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
34 ವರ್ಷದ ಶ್ರೀಶಾಂತ್ 2013ರ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಸ್ಪಾಟ್ ಫಿಕ್ಸಿಂಗ್ ವಿಚಾರದಲ್ಲಿ ಬಿಸಿಸಿಐನಿಂದ ಆಜೀವ ನಿಷೇಧಕ್ಕೊಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಶ್ರೀಶಾಂತ್ ಪೊಲೀಸರು ಕಟ್ಟಕತೆ ಕಟ್ಟುತ್ತಿದ್ದಾರೆ. ಅವರ ಮಾತಿನಲ್ಲಿ ಹುರುಳಿಲ್ಲ. ಹೀಗಾಗಿ ಸ್ಕಾಟ್ಲೆಂಡ್ ಲೀಗ್ ನಲ್ಲಿ ಆಡುವಂತೆ ಅನುಮತಿ ನೀಡಲು ಬಿಸಿಸಿಐಗೆ ನಿರ್ದೇಶನ ನೀಡಬೇಕೆಂದು ಕೋರ್ಟ್ ಗೆ ಮೊರೆ ಹೋಗಿದ್ದಾರೆ.
ಸ್ಕಾಟ್ಲೆಂಡ್ ನ ಗ್ಲೆನ್ ರೋತ್ ಕ್ಲಬ್ ನಿಂದ ಏಪ್ರಿಲ್ ನಲ್ಲಿ ನಡೆಯಲಿರುವ ಪ್ರಿಮಿಯರ್ ಲೀಗ್ ನಲ್ಲಿ ಆಡಲು ನನಗೆ ಆಹ್ವಾನ ಬಂದಿದ್ದು, ಕ್ಲಬ್ ಸೇರಲು ಎನ್ಒಸಿ ಬೇಕೆಂದು ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.