ಅಲ್ಪ ಗುರಿ ಮಧ್ಯೆ ಎದುರಾಳಿ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕಿ ಭಾರತ ಸಾಧನೆ
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದ್ದು ಮೊದಲ ಟೆಸ್ಟ್ ಪಂದ್ಯದ ಸೋಲಿಗೆ ತಕ್ಕ ಪ್ರತ್ಯುತ್ತರ ನೀಡಿದೆ...
ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದ್ದು ಮೊದಲ ಟೆಸ್ಟ್ ಪಂದ್ಯದ ಸೋಲಿಗೆ ತಕ್ಕ ಪ್ರತ್ಯುತ್ತರ ನೀಡಿದೆ.
ಈ ಮಧ್ಯೆ ಭಾರತ ಮತ್ತೊಂದು ಸಾಧನೆಯನ್ನು ಮಾಡಿದೆ. ಅಲ್ಪ ಗುರಿ ಮಧ್ಯೆ ಎದುರಾಳಿ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕಿ ಸಾಧನೆಯನ್ನು ಟೀಂ ಇಂಡಿಯಾ ಮಾಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾ ತಂಡಕ್ಕೆ 188 ಅಲ್ಪ ಮೊತ್ತ ಗುರಿ ನೀಡಿದ್ದು, ಎದುರಾಳಿ ತಂಡವನ್ನು 112 ರನ್ ಗಳಿಗೆ ಕಟ್ಟಿಹಾಕಿ ಜಯ ಸಾಧಿಸಿದೆ.
2004ರ ನವೆಂಬರ್ 3ರಂದು ಮುಂಬೈನಲ್ಲಿ ನಡೆದಿದ್ದ ಪಂದ್ಯದಲ್ಲಿ ಭಾರತ ಕೇವಲ 107 ರನ್ ಗಳ ಅಲ್ಪ ಮೊತ್ತದ ಗುರಿ ನೀಡಿತ್ತು. ಈ ಅಲ್ಪ ಮೊತ್ತದ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾವನ್ನು 93 ರನ್ ಗಳಿಗೆ ಆಲೌಟ್ ಮಾಡುವ ಮೂಲಕ 13 ರನ್ ಗಳಿಂದ ಜಯ ಗಳಿಸಿದ್ದು ಇಲ್ಲಿಯವರೆಗಿನ ಅಭೂತಪೂರ್ವ ಸಾಧನೆಯಾಗಿದೆ.
ಇನ್ನು 1981ರ ಫೆಬ್ರವರಿ 7ರಂದು ಮೆಲ್ಬೋರ್ನ್ ನಲ್ಲಿ ನಡೆದಿದ್ದ ಪಂದ್ಯದಲ್ಲಿ ಭಾರತ ಆಸ್ಟ್ರೇಲಿಯಾಗೆ 143 ರನ್ ಗಳ ಅಲ್ಪ ಮೊತ್ತ ನೀಡಿತ್ತು. ಈ ಪಂದ್ಯದಲ್ಲೂ ಆಸ್ಟ್ರೇಲಿಯಾ ತಂಡವನ್ನು 83 ರನ್ ಗಳಿಗೆ ಮಣಿಸುವ ಮೂಲಕ ಅಲ್ಪ ಮೊತ್ತಕ್ಕೆ ಕಟ್ಟಿಹಾಕಿದ ಸಾಧನೆ ಮಾಡಿತ್ತು.