ಐಪಿಎಲ್ 10: ಕಿಂಗ್ಸ್ ಇಲೆವೆನ್ ಗೆ ಗ್ಲೆನ್ ಮ್ಯಾಕ್ಸ್ವೆಲ್ ನಾಯಕ
ಇಂಡಿಯನ್ ಪ್ರಿಮಿಯಲ್ ಲೀಗ್(ಐಪಿಎಲ್) 10ನೇ ಆವೃತ್ತಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಆಸ್ಟ್ರೇಲಿಯಾದ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ನಾಯಕರಾಗಿ...
ನವದೆಹಲಿ: ಇಂಡಿಯನ್ ಪ್ರಿಮಿಯಲ್ ಲೀಗ್(ಐಪಿಎಲ್) 10ನೇ ಆವೃತ್ತಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಕ್ಕೆ ಆಸ್ಟ್ರೇಲಿಯಾದ ಸ್ಟಾರ್ ಆಲ್ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ವಿಷಯವನ್ನು ಕಿಂಗ್ಸ್ ಫ್ರಾಂಚೈಸಿ ಟ್ವೀಟರ್ ಮೂಲಕ ಖಚಿತಪಡಿಸಿದೆ.
ದಕ್ಷಿಣ ಆಫ್ರಿಕಾದ ಡೇವಿಡ್ ಮಿಲ್ಲರ್ 2015ರಲ್ಲಿ ತಂಡದ ನಾಯಕರಾಗಿದ್ದರೂ, ಟೂರ್ನಿಯ ಮಧ್ಯದಲ್ಲಿಯೇ ಮುರಳಿ ವಿಜಯ್ ಸಾರಥ್ಯ ವಹಿಸಿಕೊಂಡಿದ್ದರು. ಆದರೆ ಇದರಿಂದ ತಂಡದ ಅದೃಷ್ಟ ಬದಲಾಗಿರಲಿಲ್ಲ. ಸತತ 2ನೇ ಆವೃತ್ತಿಯಲ್ಲೂ ಪಂಜಾಬ್ ಕೊನೆಯ ಸ್ಥಾನ ಪಡೆದಿತ್ತು.
ಐಪಿಎಲ್ 10 ಏಪ್ರಿಲ್ 5 ರಿಂದ ಮೇ 21ರವರೆಗೆ ನಡೆಯಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.