ಪಾಕ್ ವಿರುದ್ಧ ಟಿ20 ವಿಶ್ವಕಪ್ ಗೆದ್ದ ಅಂಧರ ಕ್ರಿಕೆಟ್ ತಂಡಕ್ಕೆ ಬಿಸಿಸಿಐನಿಂದ 1 ಕೋಟಿ ಬಹುಮಾನ
ಅಂಧರ ಟಿ20 ವಿಶ್ವಕಪ್ ತಂಡವನ್ನು ಸೋಲಿಸಿ ಸತತ 2ನೇ ಬಾರಿಗೆ ಚಾಂಪಿಯನ್ ಆಗಿದ್ದ ಅಂಧರ ಕ್ರಿಕೆಟ್ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) 1 ಕೋಟಿ...
ನವದೆಹಲಿ: ಅಂಧರ ಟಿ20 ವಿಶ್ವಕಪ್ ತಂಡವನ್ನು ಸೋಲಿಸಿ ಸತತ 2ನೇ ಬಾರಿಗೆ ಚಾಂಪಿಯನ್ ಆಗಿದ್ದ ಅಂಧರ ಕ್ರಿಕೆಟ್ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) 1 ಕೋಟಿ ಬಹುಮಾನ ನೀಡಿದೆ.
ಇದೇ ಮೊದಲ ಬಾರಿಗೆ ತನ್ನ ಮಾನ್ಯತೆಯಿಲ್ಲದ ಕ್ರಿಕೆಟ್ ತಂಡಕ್ಕೆ ಬಿಸಿಸಿಐ ದೊಡ್ಡ ಮೊತ್ತದ ನಗದು ಬಹುಮಾನ ಘೋಷಿಸಿದೆ. ಬೆಂಗಳೂರಿನಲ್ಲಿ ನಡೆದ ಅಂಧರ ಟಿ20 ವಿಶ್ವಕಪ್ ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಭಾರತ ಮಣಿಸಿತ್ತು.
ಸುಪ್ರೀಂಕೋರ್ಟ್ ನೇಮಿಸಿರುವ ಕ್ರಿಕೆಟ್ ಆಡಳಿತಾಧಿಕಾರಿಗಳ ಸಮಿತಿ(ಸಿಒಎ) ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.