ಕೋಚ್ ಕುಂಬ್ಳೆಗೆ ಟೀಂ ಇಂಡಿಯಾ ಡೈರೆಕ್ಟರ್ ಹುದ್ದೆ, ಕುಂಬ್ಳೆ ಸ್ಥಾನಕ್ಕೆ ರಾಹುಲ್ ದ್ರಾವಿಡ್?
ಟೀಂ ಇಂಡಿಯಾದ ಪ್ರಧಾನ ಕೋಚ್ ಅನಿಲ್ ಕುಂಬ್ಳೆ ಅವರಿಗೆ ಭಾರತ ಡೈರೆಕ್ಟರ್ ಆಗಿ ಬಡ್ತಿ ಪಡೆಯಲಿದ್ದು ಕೋಚ್ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಆಯ್ಕೆ ಆಗುವ ಸಾಧ್ಯತೆ ಇದೆ...
ಮುಂಬೈ: ಟೀಂ ಇಂಡಿಯಾದ ಪ್ರಧಾನ ಕೋಚ್ ಅನಿಲ್ ಕುಂಬ್ಳೆ ಅವರಿಗೆ ಭಾರತ ಡೈರೆಕ್ಟರ್ ಆಗಿ ಬಡ್ತಿ ಪಡೆಯಲಿದ್ದು ಕೋಚ್ ಸ್ಥಾನಕ್ಕೆ ರಾಹುಲ್ ದ್ರಾವಿಡ್ ಆಯ್ಕೆ ಆಗುವ ಸಾಧ್ಯತೆ ಇದೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಟೀಂ ಇಂಡಿಯಾ ಸಿಬ್ಬಂದಿ ವಲಯದಲ್ಲಿ ದೊಡ್ಡ ಮಟ್ಟದ ಬದಲಾವಣೆ ಆಗುವ ಸೂಚನೆ ಸಿಕ್ಕಿದೆ. ಇನ್ನು ಕುಂಬ್ಳೆ ನಿರ್ದೇಶಕನಾಗಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯೇ ಅನಿಲ್ ಪಾಲಿಗೆ ಕೊನೆಯದಾಗಲಿದ್ದು ಏಪ್ರಿಲ್ 14ರ ಬಳಿಕ ಟೀಂ ಡೈರೆಕ್ಟರ್ ಹುದ್ದೆಯನ್ನು ಅಲಂಕರಿಸಲಿದ್ದಾರೆ ಎನ್ನಲಾಗಿದೆ.
ಇನ್ನು 19 ವಯೋಮಿತಿ ಮತ್ತು ಟೀಂ ಇಂಡಿಯಾ ಎ ತಂಡಕ್ಕೆ ಕೋಚಿಂಗ್ ನೀಡುತ್ತಿರುವ ರಾಹುಲ್ ದ್ರಾವಿಡ್ ಗೆ ರಾಷ್ಟ್ರೀಯ ತಂಡದ ಕೋಚಿಂಗ್ ನೀಡುವ ಕುರಿತು ಮಾತುಕತೆ ನಡೆಯುತ್ತಿದೆ. ಕುಂಬ್ಳೆ ನಿರ್ದೇಶಕನ ಈ ಹುದ್ದೆ ವಹಿಸಿಕೊಳ್ಳುತ್ತಾರೋ ಇಲ್ಲವೋ ಎನ್ನುವ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.