ವಿರಾಟ್ ಕೊಹ್ಲಿಯನ್ನು ಅಣಕಿಸುತ್ತಿರುವ ಆಸೀಸ್ ಆಟಗಾರ 
ಕ್ರಿಕೆಟ್

ಆಸಿಸ್ ಆಟಗಾರರ ಕುಚೇಷ್ಟೆ: ನೋವಿನಿಂದ ನರಳುತ್ತಿರುವ ಕೊಹ್ಲಿಯನ್ನು ಮ್ಯಾಕ್ಸ್ ವೆಲ್ ಅಣಕಿಸಿದ್ದು ಹೀಗೆ

ಪ್ರವಾಸಿ ಆಸ್ಟ್ರೇಲಿಯಾ ತಂಡದ ವಿರುದ್ಧ ರಾಂಚಿಯಲ್ಲಿ ನಡೆಯುತ್ತಿರುವ ಬಾರ್ಡರ್‌-ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್‌ ಪಂದ್ಯದ ಮೊದಲನೇ ದಿನ ಫಿಲ್ಡಿಂಗ್ ಮಾಡುತ್ತಿದ್ದ...

ರಾಂಚಿ: ಪ್ರವಾಸಿ ಆಸ್ಟ್ರೇಲಿಯಾ ತಂಡದ ವಿರುದ್ಧ ರಾಂಚಿಯಲ್ಲಿ ನಡೆಯುತ್ತಿರುವ ಬಾರ್ಡರ್‌-ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್‌ ಪಂದ್ಯದ ಮೊದಲನೇ ದಿನ ಫಿಲ್ಡಿಂಗ್ ಮಾಡುತ್ತಿದ್ದ ವೇಳೆ ಟೀಂ ಇಂಡಿಯಾ ತಂಡದ ನಾಯಕ ವಿರಾಟ್‌ ಕೊಹ್ಲಿ ಭುಜದ ನೋವಿಗೆ ಒಳಗಾಗಿದ್ದಾರೆ.

ನೋವಿನ ನಡುವೆಯೂ  ಕೊಹ್ಲಿ ಮೈದಾನಕ್ಕಿಳಿದು ಬ್ಯಾಟಿಂಗ್‌ ಮಾಡಲು ಮುಂದಾಗಿದ್ದರು. 4ನೇ ಕ್ರಮಾಂಕದ ಬ್ಯಾಟ್ಸ್‌‌ಮನ್ ಆಗಿ ಕ್ರೀಸ್‌ಗೆ ಬಂದ ಕೊಹ್ಲಿ 23 ಎಸೆತಗಳನ್ನು ಎದುರಿಸಿ 6 ರನ್‌ಗಳಿಸಿ ಸ್ಟಿವನ್ ಸ್ಮಿತ್‌ಗೆ ಕ್ಯಾಚ್ ನೀಡಿ ವಿಕೆಟ್ ಕೈ ಚೆಲ್ಲಿದರು. ಈ ಸಂದರ್ಭ ಸ್ಮಿತ್ ನೋವಿಗೆ ತುತ್ತಾದವರಂತೆ ಭುಜದ ಮೇಲೆ ಕೈಯಿಟ್ಟು ವಿರಾಟ್ ಕೊಹ್ಲಿಯನ್ನು ಅಣಕಿಸಿದ್ದಾರೆ.

ಇದನ್ನೇ ಮತ್ತೋರ್ವ ಆಸೀಸ್‌ ಆಟಗಾರ ಗ್ಲೆನ್ ಮ್ಯಾಕ್ಸ್‌‌ವೆಲ್ ಕೂಡ ಅನುಕರಿಸಿ ಕೊಹ್ಲಿ ಅವರನ್ನು ಅಣಕಿಸಿದರು. ಆಸಿಸ್ ಆಟಗಾರರ ಈ ಕುಚೇಷ್ಟೇ ಸಾಮಾಜಿಕ ತಾಣದಲ್ಲಿ ಭಾರಿ ಟೀಕೆಗೆ ಗುರಿಯಾಗಿದೆ.

ಕೊಹ್ಲಿಯನ್ನು ಅಣಕಿಸುವ ಮೂಲಕ ಆಸೀಸ್ ಆಟಗಾರರು ತಮ್ಮ ಅಪ್ರಬುದ್ಧತೆ ತೋರಿದ್ದಾರೆ ಎಂದು ಅಭಿಮಾನಿಗಳು ಕಿಡಿ ಕಾರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video