ಕೊಲಂಬೊ: ಬಾಂಗ್ಲಾದೇಶ ತನ್ನ 100ನೇ ಟೆಸ್ಟ್ ಪಂದ್ಯವನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿದೆ.
ಪಿ.ಸಾರಾ ಓವಲ್ ಮೈದಾನದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಬಾಂಗ್ಲನ್ನರ ತಂಡ 4 ವಿಕೆಟ್ ಗಳ ಸ್ಮರಣೀಯ ಗೆಲುವು ಸಾಧಿಸಿತು.
ಇದರೊಂದಿಗೆ 100ನೇ ಟೆಸ್ಟ್ ಪಂದ್ಯದಲ್ಲಿ ಗೆಲುವು ಸಾಧಿಸಿದ 4ನೇ ತಂಡ ಎಂಬ ಹಿರಿಮೆಗೂ ಬಾಂಗ್ಲಾ ಪಾತ್ರವಾಗಿದೆ. ಈ ಹಿಂದೆ ಆಸ್ಟ್ರೇಲಿಯಾ, ವೆಸ್ಟ್ ಇಂಡೀಸ್ ಹಾಗೂ ಪಾಕಿಸ್ತಾನ ತಂಡಗಳು ನೂರನೇ ಟೆಸ್ಟ್ ಪಂದ್ಯಗಳನ್ನು ಗೆದ್ದು ಇತಿಹಾಸ ನಿರ್ಮಿಸಿದ್ದವು.