ಟೀಂ ಇಂಡಿಯಾ, ಪಾಕಿಸ್ತಾನ 
ಕ್ರಿಕೆಟ್

ವಿಶ್ವಕಪ್‌ನಲ್ಲಿ ಭಾರತ-ಪಾಕ್ 11 ಬಾರಿ ಮುಖಾಮುಖಿ: 11ರಲ್ಲೂ ಟೀಂ ಇಂಡಿಯಾ ದಿಗ್ವಿಜಯ

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಇಲ್ಲಿಯವರೆಗೂ ವಿಶ್ವಕಪ್ ನಲ್ಲಿ 11 ಬಾರಿ ಮುಖಾಮುಖಿಯಾಗಿದ್ದು 11ರಲ್ಲೂ ಟೀಂ ಇಂಡಿಯಾ ದಿಗ್ವಿಜಯ ಸಾಧಿಸಿದೆ...

ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಇಲ್ಲಿಯವರೆಗೂ ವಿಶ್ವಕಪ್ ನಲ್ಲಿ 11 ಬಾರಿ ಮುಖಾಮುಖಿಯಾಗಿದ್ದು 11ರಲ್ಲೂ ಟೀಂ ಇಂಡಿಯಾ ದಿಗ್ವಿಜಯ ಸಾಧಿಸಿದೆ. 2016ರ ಮಾರ್ಚ್ 19ರಂದು ಕೊನೆಯ ಬಾರಿಗೆ ಉಭಯ ತಂಡಗಳು ಮುಖಾಮುಖಿಯಾಗಿದ್ದು ನಿನ್ನೆಗೆ ಒಂದು ವರ್ಷವಾಗಿದೆ. 
ಏಕದಿನ ವಿಶ್ವಕಪ್ ನಲ್ಲಿ 6 ಬಾರಿ ಮತ್ತು ಟಿ20 ವಿಶ್ವಕಪ್ ನಲ್ಲಿ 5 ಬಾರಿ ಉಭಯ ತಂಡಗಳು ಮುಖಾಮುಖಿಯಾಗಿದ್ದು ಅದರ ವಿವರ ಇಲ್ಲಿದೆ. 
* ಸಿಡ್ನಿಯಲ್ಲಿ 1992ರ ಮಾರ್ಚ್ 1ರಂದು ನಡೆದಿದ್ದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾಗಿದ್ದವು. ಇದರಲ್ಲಿ ಪಾಕಿಸ್ತಾನವನ್ನು ಭಾರತ 43 ರನ್ ಗಳಿಂದ ಮಣಿಸಿ ವಿಜಯದ ನಾಗಾಲೋಟ ಶುರುಮಾಡಿತ್ತು. ಈ ಪಂದ್ಯದಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅದ್ಭುತ ಬ್ಯಾಟಿಂಗ್ ಗಾಗಿ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾಗಿದ್ದರು. 
* 1996ರ ಮಾರ್ಚ್ 9ರಂದು ಬೆಂಗಳೂರಿನಲ್ಲಿ ನಡೆದಿದ್ದ ವಿಶ್ವಕಪ್ ಟೂರ್ನಿಯಲ್ಲಿ ಭಾರತ-ಪಾಕಿಸ್ತಾನ ಎರಡನೇ ಬಾರಿಗೆ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 39 ರನ್ ಗಳಿಂದ ಮಣಿಸಿತ್ತು. ಈ ಪಂದ್ಯದಲ್ಲಿ ನವಜೋತ್ ಸಿಂಗ್ ಸಿಧು ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದಿದ್ದರು. 
* 1999ರ ಜೂನ್ 8ರಂದು ಉಭಯ ತಂಡಗಳು ಮೂರನೇ ಬಾರಿಗೆ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲೂ ಪಾಕಿಸ್ತಾನವನ್ನು ಭಾರತ 47 ರನ್ ಗಳಿಂದ ಮಣಿಸಿತ್ತು. ಈ ಪಂದ್ಯದಲ್ಲಿ ವೆಂಕಟೇಶ್ ಪ್ರಸಾದ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾಗಿದ್ದರು. 
* 2003ರ ಮಾರ್ಚ್ 1ರಂದು ಸೆಂಚುರಿಯನ್ ನಲ್ಲಿ ನಡೆದ ವಿಶ್ವಕಪ್ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್ ಗಳಿಂದ ಮಣಿಸಿತ್ತು. ಈ ಪಂದ್ಯದಲ್ಲಿ ಸಚಿನ್ ತೆಂಡೂಲ್ಕರ್ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದಿದ್ದರು. 
* 2007ರ ಸೆಪ್ಟೆಂಬರ್ 14ರಂದು ನಡೆದ ಟಿ20 ಪಂದ್ಯದಲ್ಲಿ ಉಭಯ ತಂಡಗಳ ನಡುವೆ ಟೈ ಆಗಿತ್ತು. ನಂತರ ನಡೆದ ಬಾಲ್ ಔಟ್ ನಲ್ಲಿ ಭಾರತ ಪಾಕಿಸ್ತಾನವನ್ನು ಬಗ್ಗುಬಡಿದಿತ್ತು. ಇದರಲ್ಲಿ ಮೊಹಮ್ಮದ್ ಆಸೀಫ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾಗಿದ್ದರು. 
* 2007ರ ಸೆಪ್ಟೆಂಬರ್ 24ರಂದು ನಡೆದ ಮೊದಲ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 5 ರನ್ ಗಳಿಂದ ಮಣಿಸಿ ಚೊಚ್ಚಲ ಟಿ20 ವಿಶ್ವಕಪ್ ಗೆ ಮುತ್ತಿಟ್ಟಿತ್ತು. ಈ ಪಂದ್ಯದಲ್ಲಿ ಇರ್ಫಾನ್ ಪಠಾನ್ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದಿದ್ದರು. 
* 2011ರ ಮಾರ್ಚ್ 30 ರಂದು ನಡೆದಿದ್ದ ಏಕದಿನ ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ಪಾಕಿಸ್ತಾನವನ್ನು 29 ರನ್ ಗಳಿಂದ ಮಣಿಸಿತ್ತು. ಸಚಿನ್ ತೆಂಡೂಲ್ಕರ್ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದಿದ್ದರು. ಈ ವಿಶ್ವಕಪ್ ಟೂರ್ನಿಯನ್ನು ಗೆಲ್ಲುವ ಮೂಲಕ ಎರಡು ಏಕದಿನ ವಿಶ್ವಕಪ್ ಗೆದ್ದ ಸಾಧನೆ ಮಾಡಿದೆ. 
* 2012ರ ಸೆಪ್ಟೆಂಬರ್ 30ರಂದು ನಡೆದಿದ್ದ ಟಿ20 ವಿಶ್ವಕಪ್ ನಲ್ಲಿ ಭಾರತ ಪಾಕಿಸ್ತಾನವನ್ನು 8 ವಿಕೆಟ್ ಗಳಿಂದ ಮಣಿಸಿತ್ತು. ಆ ಮೂಲಕ ಸತತ ಎಂಟು ಬಾರಿ ಪಾಕಿಸ್ತಾನವನ್ನು ಮಣಿಸಿದ ಸಾಧನೆ ಮಾಡಿದೆ. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾಗಿದ್ದರು. 
* 2014 ಮಾರ್ಚ್ 31 ರಂದು ನಡೆದ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಪಾಕಿಸ್ತಾನವನ್ನು 7 ವಿಕೆಟ್ ಗಳಿಂದ ಮಣಿಸಿತ್ತು. ಈ ಪಂದ್ಯದಲ್ಲಿ ಅಮಿತ್ ಮಿಶ್ರಾ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದಿದ್ದರು. 
* 2015ರ ಫೆಬ್ರವರಿಯಲ್ಲಿ ನಡೆದ ವಿಶ್ವಕಪ್ ಟೂರ್ನಿಯಲ್ಲಿ ಉಭಯ ತಂಡಗಳು ಮತ್ತೆ ಮುಖಾಮುಖಿಯಾಗಿದ್ದವು. ಇದರಲ್ಲಿ ಭಾರತ 76 ರನ್ ಗಳಿಂದ ಪಾಕಿಸ್ತಾನವನ್ನು ಮಣಿಸಿತು. ಇದು ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ 10ನೇ ಗೆಲುವಾಗಿತ್ತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾಗಿದ್ದರು. 
* 2016ರ ಮಾರ್ಚ್ 19ರಂದು ನಡೆದಿದ್ದ ವಿಶ್ವಕಪ್ ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಹನ್ನೊಂದನೆ ಬಾರಿಗೆ ಮುಖಾಮುಖಿಯಾಗಿದ್ದವು. ಇದರಲ್ಲಿ ಪಾಕಿಸ್ತಾನವನ್ನು ಭಾರತ 6 ವಿಕೆಟ್ ಗಳಿಂದ ಮಣಿಸಿ ವಿಜಯದ ಮಾಲೆ ಧರಿಸಿತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾಗಿದ್ದರು. ಈಗೆ ಉಭಯ ತಂಡಗಳು ವಿಶ್ವಕಪ್ ಟೂರ್ನಿಯಲ್ಲಿ 11 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಪ್ರತಿಬಾರಿಯು ವಿಜಯದ ಪತಾಕೆಯನ್ನು ಹಾರಿಸುತ್ತಾ ಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!