ಭಾರತೀಯ ಪಿಚ್ಗಳಲ್ಲಿ ಆಸ್ಟ್ರೇಲಿಯಾ ಪ್ರದರ್ಶನ ಉತ್ತಮವಾಗಿದೆ: ಗೌತಮ್ ಗಂಭೀರ್
ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ತಂಡ ಭಾರತೀಯ ಪಿಚ್ ಗಳಲ್ಲಿ ಉತ್ತಮವಾಗಿ ಪ್ರದರ್ಶನ ನೀಡುತ್ತಿದ್ದು ಆತಿಥೇಯ ತಂಡವನ್ನೇ ಒತ್ತಡಕ್ಕೆ...
ನವದೆಹಲಿ: ಭಾರತ ಪ್ರವಾಸದಲ್ಲಿರುವ ಆಸ್ಟ್ರೇಲಿಯಾ ಟೆಸ್ಟ್ ಕ್ರಿಕೆಟ್ ತಂಡ ಭಾರತೀಯ ಪಿಚ್ ಗಳಲ್ಲಿ ಉತ್ತಮವಾಗಿ ಪ್ರದರ್ಶನ ನೀಡುತ್ತಿದ್ದು ಆತಿಥೇಯ ತಂಡವನ್ನೇ ಒತ್ತಡಕ್ಕೆ ಸಿಲುಕಿಸುತ್ತಿದ್ದು ಆಸ್ಟ್ರೇಲಿಯಾ ತಂಡಕ್ಕೆ ತಕ್ಕ ಗೌರವಸಲ್ಲಬೇಕು ಎಂದು ಭಾರತೀಯ ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ.
ಟೀಂ ಇಂಡಿಯಾ ದಿಗ್ಗಜರಾದ ಮಾಜಿ ನಾಯಕ ಸೌರವ್ ಗಂಗೂಲಿ, ಹಿರಿಯ ಸ್ಪಿನ್ನರ್ ಹರ್ಭಜನ್ ಸಿಂಗ್ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಕ್ಲೀನ್ ಸ್ವೀಪ್ ಸಾಧನೆ ಮಾಡಲಿದೆ ಎಂದು ಭವಿಷ್ಯ ನುಡಿದಿದ್ದರು. ಆದರೆ ಆಸ್ಟ್ರೇಲಿಯಾ ಅತ್ಯುತ್ತಮ ಆಟದ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದೆ ಎಂದರು.
ಜಗತ್ತಿನ ಎರಡು ಶ್ರೇಷ್ಠ ತಂಡಗಳ ನಡುವೆ ಈ ರೀತಿಯ ಪೈಪೋಟಿ, ಆಟದ ಜನಪ್ರಿಯತೆಯನ್ನು ಹೆಚ್ಚಿಸುತ್ತದೆ ಎಂದು ಗಂಭೀರ್ ಹೇಳಿದ್ದಾರೆ.