ಧರ್ಮಶಾಲಾ: ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಭುಜದ ಗಾಯಕ್ಕೆ ತುತ್ತಾಗಿದ್ದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಾನು ಸಂಪೂರ್ಣವಾಗಿ ಫಿಟ್ ಆಗಿದ್ದರೆ ಮಾತ್ರ ಧರ್ಮಶಾಲಾ ಟೆಸ್ಟ್ ನಲ್ಲಿ ಆಡುತ್ತೇನೆ ಎಂದು ಹೇಳಿದ್ದಾರೆ.
ಬಾರ್ಡರ್-ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ನಾಳೆ ಧರ್ಮಶಾಲಾದಲ್ಲಿ ಆರಂಭಗೊಳ್ಳಲಿದ್ದು ಈ ಸಂಬಂಧ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿರಾಟ್ ಕೊಹ್ಲಿ, ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ನಾನು ವಿಫಲನಾದರೂ ತಂಡದ ಇತರ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಹೀಗಾಗಿ ಶೇ. 100 ಫಿಟ್ ಇದ್ದರೆ ಮಾತ್ರ ನಾನು ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುತ್ತೇನೆ ಎಂದು ಹೇಳಿದ್ದಾರೆ.
ಇತರ ಆಟಗಾರರಂತೆ ತಂಡದಲ್ಲಿ ನಾನು ಒಬ್ಬ. ಅವರಿಗೆ ಅನ್ವಯವಾಗುವ ನಿಯಮಗಳೇ ನನಗೂ ಅನ್ವಯವಾಗುತ್ತದೆ. ಭುಜದ ನೋವಿಗೆ ನಾನು ಯಾವುದೇ ವಿಶೇಷ ಚಿಕಿತ್ಸೆ ಪಡೆಯುತ್ತಿಲ್ಲ. ಆದರೆ ನಾನು ಶೇ.100 ರಷ್ಟು ಫಿಟ್ ಆಗಿದ್ದೇನೆ ಎಂದು ಫಿಸಿಯೋ ವರದಿ ನೀಡಿದರೆ ಮಾತ್ರ ನಾಳಿನ ಪಂದ್ಯದಲ್ಲಿ ಆಡುತ್ತೇನೆ ಎಂದು ಕೊಹ್ಲಿ ಸ್ಪಷ್ಟಪಡಿಸಿದ್ದಾರೆ.
ನನ್ನ ವಿರುದ್ಧ ಆಸ್ಟ್ರೇಲಿಯಾ ಮಾಧ್ಯಮಗಳು ಟೀಕೆ ಮಾಡುತ್ತಿದ್ದು ಈ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಬೇರೆಯವರು ಏನು ಹೇಳುತ್ತಿದ್ದಾರೆ ಎನ್ನುವುದಕ್ಕಿಂತ ತನ್ನ ತಂಡದ ಆಟಗಾರರು ನನ್ನ ಕುರಿತು ಯಾವ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂಬುದೇ ನನಗೆ ಮುಖ್ಯ ಎಂದು ಕೊಹ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics