ಧರ್ಮಶಾಲಾ: ರಾಂಚಿ ಟೆಸ್ಟ್ ಪಂದ್ಯದ ವೇಳೆ ಭುಜದ ಗಾಯದ ಸಮಸ್ಯೆಗೆ ತುತ್ತಾಗಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಡುವ ಸಾಧ್ಯತೆ ಕಡಿಮೆ ಇದೆ ಎನ್ನಲಾಗಿದೆ.
ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯ ಕೊನೆಯ ಪಂದ್ಯ ಧರ್ಮಶಾಲಾದಲ್ಲಿ ನಡೆಯಲಿದ್ದು ವಿರಾಟ್ ಕೊಹ್ಲಿ ಇನ್ನು ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ ಅವರು ಮೈದಾನಕ್ಕೆ ಇಳಿಯುವುದು ಅನುಮಾನವಾಗಿದೆ. ನಿನ್ನೆ ನಡೆದ ತಂಡದ ಅಭ್ಯಾಸದ ವೇಳೆ ಬಲಗೈನ ಭುಜಕ್ಕೆ ಪ್ಲ್ಯಾಸ್ಟರ್ ಹಾಕಿಕೊಂಡೇ ಮೈದಾನಕ್ಕೆ ಇಳಿದಿದ್ದರು. ಆದರೆ ನೆಟ್ಸ್ ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸದೇ ಇರುವುದು ಅನುಮಾನಕ್ಕೆ ಮತ್ತಷ್ಟು ಬಲ ತಂದಿದೆ.
ಇನ್ನು ರಣಜಿ ಟ್ರೋಫಿ ಕ್ರಿಕೆಟ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಶ್ರೇಯಸ್ ಅಯ್ಯರ್ ಅವರಿಗೆ ರಾಷ್ಟ್ರೀಯ ತಂಡದಿಂದ ಕರೆ ಬಂದಿದ್ದು ಧರ್ಮಶಾಲಾ ಟೆಸ್ಟ್ ನಲ್ಲಿ ತಂಡವನ್ನು ಪ್ರತಿನಿಧಿಸಲಿದ್ದಾರೆ.
ಟೋರ್ನಿಯ ನಾಲ್ಕು ಟೆಸ್ಟ್ ಪಂದ್ಯದಲ್ಲಿ ಉಭಯ ತಂಡಗಳು 1-1 ಅಂತರದಿಂದ ಗೆಲವು ಸಾಧಿಸಿ ಸಮಬಲ ಸಾಧಿಸಿದ್ದಾರೆ. ಇನ್ನು ಮೂರನೇ ಟೆಸ್ಟ್ ಡ್ರಾನಲ್ಲಿ ಅಂತ್ಯವಾಗಿದ್ದು ನಾಳೆಯಿಂದ ಪ್ರಾರಂಭವಾಗಲಿರುವ ಧರ್ಮಶಾಲಾ ಟೆಸ್ಟ್ ಸರಣಿಯ ನಿರ್ಣಾಯಕ ಪಂದ್ಯವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics