ರಾಜಿನಾಮೆ ಹಿಂಪಡೆದ ಐಸಿಸಿ ಮುಖ್ಯಸ್ಥ ಶಶಾಂಕ್ ಮನೋಹರ್
ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಮುಖ್ಯಸ್ಥ ಸ್ಥಾನಕ್ಕೆ ನೀಡಿದ್ದ ರಾಜಿನಾಮೆಯನ್ನು ಶಶಾಂಕ್ ಮನೋಹರ್ ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ...
ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಮುಖ್ಯಸ್ಥ ಸ್ಥಾನಕ್ಕೆ ನೀಡಿದ್ದ ರಾಜಿನಾಮೆಯನ್ನು ಶಶಾಂಕ್ ಮನೋಹರ್ ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ.
ಈ ವರ್ಷ ನಡೆಯಲಿರುವ ವಾರ್ಷಿಕ ಸಮ್ಮೇಳನದವರೆಗೆ ಮುಂದುವರೆಯುವಂತೆ ಐಸಿಸಿ ನಿರ್ದೇಶಕರು ಒಕ್ಕೊರಲ ಮನವಿ ಮಾಡಿದ್ದರಿಂದ ಶಶಾಂಕ್ ಮನೋಹರ್ ತಾತ್ಕಾಲಿಕವಾಗಿ ತಮ್ಮ ರಾಜಿನಾಮೆಯನ್ನು ಹಿಂಪಡೆದಿದ್ದಾರೆ.
ಐಸಿಸಿಯ ಪದಾಧಿಕಾರಿಗಳು ನನ್ನ ಮೇಲಿಟ್ಟಿರುವ ನಂಬಿಕೆಯನ್ನು ಗೌರವಿಸುತ್ತೇನೆ. ನನ್ನ ರಾಜಿನಾಮೆ ನಿರ್ಧಾರ ಬದಲಾಗದಿದ್ದರೂ ಐಸಿಸಿ ವಾರ್ಷಿಕ ಸಭೆಯವರೆಗೆ ಮುಂದುವರಿಯುತ್ತೇನೆ ಎಂದು ಶಶಾಂಕ್ ಮನೋಹರ್ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.