ಧರ್ಮಶಾಲಾ: ಆಸ್ಟ್ರೇಲಿಯಾ ವಿರುದ್ಧದ ನಿರ್ಣಾಯಕ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ಖ್ಯಾತ ಸ್ಪಿನ್ನರ್ ರವೀಂದ್ರ ಜಡೇಜಾ ಭರ್ಜರಿ ಬ್ಯಾಟಿಂಗ್ ಮಾಡಿ ಅರ್ಧ ಶತಕ ಸಿಡಿಸಿದ್ದಾರೆ.
ಬಾರ್ಡರ್-ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದ್ದು ಜಡೇಜಾ 95 ಎಸೆತಗಳಲ್ಲಿ ನಾಲ್ಕು ಭರ್ಜರಿ ಸಿಕ್ಸರ್ ನೊಂದಿಗೆ 63 ರನ್ ಗಳಿಸಿ ಔಟಾದರು.
ಕೆಎಲ್ ರಾಹುಲ್, ಪೂಜಾರ, ರವೀಂದ್ರ ಜಡೇಜಾರ ಅರ್ಧ ಶತಕದ ನೆರವಿನೊಂದಿಗೆ ಭಾರತ ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮುನ್ನಡೆ ಸಾಧಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ 300 ರನ್ ಗಳಿಗೆ ಸರ್ವಪತನ ಕಂಡಿತ್ತು. ನಂತರ ಇನ್ನಿಂಗ್ಸ್ ಪ್ರಾರಂಭಿಸಿದ ಭಾರತ ಸದ್ಯ 9 ವಿಕೆಟ್ ನಷ್ಟಕ್ಕೆ 318 ರನ್ ಗಳಿಸಿದ್ದು 18 ರನ್ ಗಳ ಮುನ್ನಡೆ ಸಾಧಿಸಿದೆ.