ಸಿಕ್ಸರ್ ಜಡೇಜಾ: ಟೆಸ್ಟ್ ಋತುವೊಂದರಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆ
ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್ ರವೀಂದ್ರ ಜಡೇಜಾ ಇದೀಗ ಬ್ಯಾಟಿಂಗ್ ನಲ್ಲಿ ಅದ್ಭುತ ಸಾಧನೆಯೊಂದನ್ನು ಮಾಡಿದ್ದಾರೆ. ಟೆಸ್ಟ್ ಋತುವೊಂದರಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ...
ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್ ರವೀಂದ್ರ ಜಡೇಜಾ ಇದೀಗ ಬ್ಯಾಟಿಂಗ್ ನಲ್ಲಿ ಅದ್ಭುತ ಸಾಧನೆಯೊಂದನ್ನು ಮಾಡಿದ್ದಾರೆ. ಟೆಸ್ಟ್ ಋತುವೊಂದರಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಅಗ್ರ ಆಟಗಾರನಾಗಿ ಜಡೇಜಾ ಹೊರಹೊಮ್ಮಿದ್ದಾರೆ.
2016-17ರ ವರ್ಷದಲ್ಲಿ ಜಡೇಜಾ ಇದುವರೆಗೂ 19 ಸಿಕ್ಸರ್ ಗಳನ್ನು ಸಿಡಿಸಿದ್ದಾರೆ. ಈ ಸಾಧನೆ ಈ ಹಿಂದೆ ಭಾರತದ ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ ಹೆಸರಿನಲ್ಲಿತ್ತು. ಅವರು 2010-11ರ ಸಾಲಿನಲ್ಲಿ 17 ಸಿಕ್ಸರ್ ಗಳನ್ನು ಸಿಡಿಸುವುದರೊಂದಿಗೆ ಈ ದಾಖಲೆಯನ್ನು ತಮ್ಮ ಹೆಸರಿನಲ್ಲಿಟ್ಟುಕೊಂಡಿದ್ದರು.
ಇನ್ನು ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಎಂದೇ ಕರೆಯಲಾಗುತ್ತಿದ್ದ ವೀರೇಂದ್ರ ಸೆಹ್ವಾಗ್ 2003-04ರಲ್ಲಿ 16 ಸಿಕ್ಸರ್ ಸಿಡಿಸಿದ್ದ ಸಾಧನೆ ಮಾಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.