ಶರವೇಗದ ಬೌಲರ್ ಆಸ್ಟ್ರೇಲಿಯಾ ವೇಗಿ ಶಾನ್ ಟೈಟ್ ಕ್ರಿಕೆಟ್ ಗೆ ವಿದಾಯ
ಇತ್ತೀಚೆಗಷ್ಟೇ ಆಸ್ಟ್ರೇಲಿಯಾದ ವೇಗಿ ಶಾನ್ ಟೈಟ್ ಸಾಗರೋತ್ತರ ಭಾರತೀಯ ನಾಗರಿಕ ಪಾಸ್ ಪೋರ್ಟ್ ಪಡೆದಿದ್ದು ಇದರ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ...
ಸಿಡ್ನಿ: ಇತ್ತೀಚೆಗಷ್ಟೇ ಆಸ್ಟ್ರೇಲಿಯಾದ ವೇಗಿ ಶಾನ್ ಟೈಟ್ ಸಾಗರೋತ್ತರ ಭಾರತೀಯ ನಾಗರಿಕ ಪಾಸ್ ಪೋರ್ಟ್ ಪಡೆದಿದ್ದು ಇದರ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಘೋಷಿಸಿದ್ದಾರೆ.
ಟೆಸ್ಟ್ ಕ್ರಿಕೆಟ್ ನಲ್ಲಿ ಶರವೇಗದ ಎಸೆತವೊಂದನ್ನು ಹಾಕಿದ ದಾಖಲೆ ನಿರ್ಮಿಸಿದ್ದ ಶಾನ್ ಟೈಟ್ ಅವರು ತಮ್ಮ ಕ್ರಿಕೆಟ್ ಬದುಕನ್ನು ಗುಣವಾಗದ ಮೊಣಕೈ ಗಾಯದ ನೋವು ಬಲಿ ಪಡೆದಿದೆ ಎಂದು ಸ್ವತಃ ತಿಳಿಸಿದ್ದಾರೆ. ಆಸ್ಟ್ರೇಲಿಯಾ ತಂಡವನ್ನು ಮೂರು ಮಾದರಿಗಳಲ್ಲಿ ಪ್ರತಿನಿಧಿಸಿದ್ದ ಟೈಟ್ 3 ಟೆಸ್ಟ್, 35 ಏಕದಿನ ಹಾಗೂ 21 ಟಿ20 ಪಂದ್ಯಗಳನ್ನು ಆಡಿದ್ದಾರೆ.
2010ರ ಲಾರ್ಡ್ಸ್ ಟೆಸ್ಟ್ ನಲ್ಲಿ ಗಂಟೆಗೆ 161.1 ಕಿ.ಮೀ ವೇಗದಲ್ಲಿ ಬೌಲ್ ಮಾಡಿ 2ನೇ ಅತ್ಯಂತ ವೇಗದ ಎಸೆತದ ದಾಖಲೆಯನ್ನು ಸರಿಗಟ್ಟಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.