ಕೆಎಲ್ ರಾಹುಲ್ 
ಕ್ರಿಕೆಟ್

ಒಂದೇ ಸರಣಿ, 4 ಪಂದ್ಯ: ಕನ್ನಡಿಗ ಕೆಎಲ್ ರಾಹುಲ್ 6 ಅರ್ಧ ಶತಕದ ಸಾಧನೆ

ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದ ಆಟಗಾರ ಕೆಎಲ್ ರಾಹುಲ್ ಆರು ಅರ್ಧ ಶತಕಗಳನ್ನು...

ಧರ್ಮಶಾಲಾ: ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದ ಆಟಗಾರ ಕೆಎಲ್ ರಾಹುಲ್ ಆರು ಅರ್ಧ ಶತಕಗಳನ್ನು ಸಿಡಿಸಿದ ಸಾಧನೆ ಮಾಡಿದ್ದಾರೆ. 
ಧರ್ಮಶಾಲಾ ಕ್ರಿಕೆಟ್ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಮೊದಲೆರೆಡು ಇನ್ನಿಂಗ್ಸ್ ನಲ್ಲೂ ಅರ್ಧ ಶತಕ ಸಿಡಿಸಿದ್ದಾರೆ. ಮೊದಲ ಇನ್ನಿಂಗ್ಸ್ ನಲ್ಲಿ ರಾಹುಲ್ 60 ರನ್ ಗಳಿಸಿ ಔಟಾಗಿದ್ದ ರಾಹುಲ್ ದ್ವಿತೀಯ ಇನ್ನಿಂಗ್ಸ್ ಅಜೇಯ 51 ರನ್ ಸಿಡಿಸುವ ಮೂಲಕ ಆಸ್ಟ್ರೇಲಿಯಾ ವಿರುದ್ಧದ ಸರಣಿಯೊಂದರಲ್ಲಿ ಆರು ಅರ್ಧಶತಕ ಸಿಡಿಸಿದ ಮೊದಲ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. 
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯ ಪುಣೆಯಲ್ಲಿ ನಡೆದಿದ್ದು ಇದರಲ್ಲಿ ರಾಹುಲ್ 64 ರನ್ ಗಳಿಸಿದ್ದರು. ನಂತರ ಬೆಂಗಳೂರಿನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ರಾಹುಲ್ 90 ರನ್ ಮತ್ತು ದ್ವಿತೀಯ ಇನ್ನಿಂಗ್ಸ್ ನಲ್ಲಿ 51 ರನ್ ಸಿಡಿಸಿದ್ದರು. 
ಮೂರನೇ ಟೆಸ್ಟ್ ಪಂದ್ಯ ರಾಂಚಿಯಲ್ಲಿ ನಡೆದಿದ್ದು ಈ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ರಾಹುಲ್ 67 ರನ್ ಗಳಿಸಿದ್ದಾರೆ. ಇದಕ್ಕೂ ಮುನ್ನ ಆಸ್ಟ್ರೇಲಿಯಾ ವಿರುದ್ಧದ ಸರಣಿಯೊಂದರಲ್ಲಿ 5 ಅರ್ಧಶತಕ ಸಿಡಿಸಿದ ಸಾಧನೆಯನ್ನು ಮುರಳಿ ವಿಜಯ್ ಮಾಡಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ