ಟೀಂ ಇಂಡಿಯಾ 
ಕ್ರಿಕೆಟ್

ಕ್ರಿಕೆಟ್ ಪ್ರೇಮಿಗಳಿಗೆ ಯುಗಾದಿ ಗಿಫ್ಟ್: ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾ

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಹಾಗೂ ನಿರ್ಣಾಯಕ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಅಮೋಘ ಜಯ ಸಾಧಿಸಿದ್ದು,...

ಧರ್ಮಶಾಲಾ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಹಾಗೂ ನಿರ್ಣಾಯಕ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಅಮೋಘ ಜಯ ಸಾಧಿಸಿದ್ದು, 2-1 ಅಂತರದಿಂದ ಸರಣಿ ಕೈವಶ ಮಾಡಿಕೊಂಡಿದೆ. 
ಬಾರ್ಡರ್-ಗವಾಸ್ಕರ್ ಟೂರ್ನಿಯ ನಾಲ್ಕು ಟೆಸ್ಟ್ ಪಂದ್ಯಗಳ ಪೈಕಿ ನಾಲ್ಕನೇ ಟೆಸ್ಟ್ ಪಂದ್ಯ ಧರ್ಮಶಾಲಾದಲ್ಲಿ ನಡೆದಿದ್ದು, ಈ ಪಂದ್ಯದಲ್ಲಿ ಭಾರತ 8 ವಿಕೆಟ್ ಗಳಿಂದ ಜಯ ಸಾಧಿಸಿದೆ. 
ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ನಲ್ಲಿ 300 ರನ್ ಗಳಿಗೆ ಆಲೌಟ್ ಆಯಿತು. ಬಳಿಕ ಮೈದಾನಕ್ಕಿಳಿದ ಟೀಂ ಇಂಡಿಯಾ 332 ರನ್ ಗಳಿಗೆ ಆಲೌಟ್ ಆಗಿದ್ದು, 32 ರನ್ ಗಳ ಮುನ್ನಡೆ ಸಾಧಿಸಿತ್ತು. ಬಳಿಕ ದ್ವಿತೀಯ ಇನ್ನಿಂಗ್ಸ್ ಪ್ರಾರಂಭಿಸಿದ ಆಸ್ಟ್ರೇಲಿಯಾವನ್ನು ಟೀಂ ಇಂಡಿಯಾ ಬೌಲರ್ ಗಳು ಅಲ್ಪಮೊತ್ತಕ್ಕೆ ಕಟ್ಟಿ ಹಾಕಿದರು. ಹೀಗಾಗಿ ಆಸೀಸ್ 137 ರನ್ ಗಳಿಗೆ ಸರ್ವಪತನ ಕಂಡಿತು. ಇದರೊಂದಿಗೆ 106 ರನ್ ಗಳ ಗುರಿ ಪಡೆದ ಟೀಂ ಇಂಡಿಯಾ 2 ವಿಕೆಟ್ ನಷ್ಟಕ್ಕೆ 106 ರನ್ ಸಿಡಿಸಿ ಪಂದ್ಯ ಕೈವಶ ಮಾಡಿಕೊಂಡಿತು. 
ಭಾರತ ಪರ ಕೆಎಲ್ ರಾಹುಲ್ ಅದ್ಭುತ ಅರ್ಧ ಶತಕ ಸಿಡಿಸಿದರು. ಇನ್ನು ಟೀಂ ಇಂಡಿಯಾ ನಾಯಕ ಅಜಿಂಕ್ಯ ರಹಾನೆ ಸ್ಫೋಟಕ ಬ್ಯಾಟಿಂಗ್ ಮಾಡಿ 38 ರನ್ ಗಳಿಸಿ ತಂಡಕ್ಕೆ ಜಯ ತಂದುಕೊಟ್ಟರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ