ವಿರಾಟ್ ಕೊಹ್ಲಿ 
ಕ್ರಿಕೆಟ್

ಕೊಹ್ಲಿ ನಾಯಕತ್ವದಲ್ಲಿ ಸತತ ಏಳು ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾ ಸಾಧನೆ

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ಸತತ ಏಳು ಟೆಸ್ಟ್ ಸರಣಿಗಳನ್ನು ಗೆದ್ದ ಸಾಧನೆ ಮಾಡಿದೆ...

ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ಸತತ ಏಳು ಟೆಸ್ಟ್ ಸರಣಿಗಳನ್ನು ಗೆದ್ದ ಸಾಧನೆ ಮಾಡಿದೆ. 
ಮಹೇಂದ್ರ ಸಿಂಗ್ ಧೋನಿ ನಾಯಕ್ವತದಲ್ಲಿ 2014ರ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದ ಭಾರತ ನಾಲ್ಕು ಟೆಸ್ಟ್ ಪಂದ್ಯಗಳ ಪೈಕಿ 2-0 ಅಂತರದಿಂದ ಟೆಸ್ಟ್ ಸರಣಿಯನ್ನು ಸೋತಿತ್ತು. ಇದಾದ ಬಳಿಕ ಟೆಸ್ಟ್ ತಂಡದ ನಾಯಕತ್ವವನ್ನು ವಿರಾಟ್ ಕೊಹ್ಲಿ ವಹಿಸಿಕೊಂಡರು. ತಮ್ಮ ನಾಯಕತ್ವದ ಮೊದಲ ಟೆಸ್ಟ್ ಸರಣಿ 2015ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದಿದ್ದು ನಾಲ್ಕು ಟೆಸ್ಟ್ ಪಂದ್ಯಗಳ ಪೈಕಿ 3-0 ಅಂತರದಿಂದ ಸರಣಿ ಜಯಿಸಿದರು. ಅಲ್ಲಿಂದ ಸೋಲಿನ ಕಡೆ ಮುಖ ಮಾಡಿಲ್ಲ. 
ನಂತರ ಶ್ರೀಲಂಕಾದಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಆತಿಥೇಯರನ್ನು 2-1 ಅಂತರದಿಂದ ಸೋಲಿಸಿ ಸರಣಿ ಜಯಗಳಿಸಿದರು. ಬಳಿಕ ವೆಸ್ಟ್ ಇಂಡೀಸ್ ಗೆ ಪ್ರಯಾಣ ಬೆಳೆಸಿದ ಟೀಂ ಇಂಡಿಯಾ ಅಲ್ಲಿ 2-0 ಅಂತರದಿಂದ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿ ಸರಣಿ ಗೆದ್ದಿತು. 
2016ರಲ್ಲಿ ಭಾರತ ಪ್ರವಾಸ ಕೈಗೊಂಡ ನ್ಯೂಜಿಲೆಂಡ್ ತಂಡವನ್ನು 3-0 ಅಂತರದಿಂದ ಸೋಲಿಸಿತು. ಬಳಿಕ ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಪೈಕಿ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿ ಭಾರತ ಸರಣಿ ಗೆದ್ದಿತು. ನಂತರ ಫೆಬ್ರವರಿಯಲ್ಲಿ ಬಾಂಗ್ಲಾದೇಶ ವಿರುದ್ಧ ಹೈದರಾಬಾದ್ ನಲ್ಲಿ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲೂ ಟೀಂ ಇಂಡಿಯಾ ಗೆಲುವು ಸಾಧಿಸಿತು. 
ಬಾರ್ಡರ್-ಗವಾಸ್ಕರ್ ಟ್ರೋಫಿ ಹಿನ್ನೆಲೆ ಭಾರತ ಪ್ರವಾಸ ಕೈಗೊಂಡಿದ್ದ ಆಸ್ಟ್ರೇಲಿಯಾ ತಂಡವನ್ನು ಭಾರತ ವೈಟ್ ವಾಷ್ ಮಾಡಲಿದೆ ಎಂದು ಹೇಳಲಾಗಿತ್ತು. ಆದರೆ ಪುಣೆಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ 333 ರನ್ ಗಳ ಜಯ ಗಳಿಸಿತ್ತು. ನಂತರ ಬೆಂಗಳೂರಿನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಭಾರತ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ಸರಣಿಯಲ್ಲಿ ಸಮಬಲ ಸಾಧಿಸಿತು. ರಾಂಚಿಯಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದ್ದರಿಂದ ಧರ್ಮಶಾಲಾ ಪಂದ್ಯ ನಿರ್ಣಾಯಕ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ ಭಾರತೀಯ ಆಟಗಾರರ ಅದ್ಭುತ ಪ್ರದರ್ಶನದಿಂದಾಗಿ ಸರಣಿ ಗೆಲ್ಲುವಲ್ಲಿ ಸಾಧ್ಯವಾಯಿತು. ಇದರೊಂದಿಗೆ ಸತತ ಏಳನೇ ಬಾರಿಗೆ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ತಂಡ ಸರಣಿ ಗೆದ್ದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಚಿಂತಾಮಣಿಯ Dictator, ನಿನ್ನ ವಿರುದ್ಧ ಸಮರ ನಿರಂತರ: ಎಂಸಿ ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಕಿಡಿ

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಇದ್ದಕ್ಕಿದ್ದಂತೆ ಬಾಯ್ತೆರೆದ ರಸ್ತೆ, ಕಾರು ಆಪೋಷನ, ಕೂದಲೆಳೆ ಅಂತರದಲ್ಲಿ ಚಾಲಕ ಬಚಾವ್-Video