ಕ್ರಿಕೆಟ್

ಅತ್ಯುತ್ತಮ ಪ್ರದರ್ಶನ: ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ 11ನೇ ಸ್ಥಾನಕ್ಕೇರಿದ ಕೆಎಲ್ ರಾಹುಲ್

Vishwanath S
ದುಬೈ: ಟೀಂ ಇಂಡಿಯಾ ಆರಂಭಿಕ ಆಟಗಾರ ಕೆಎಲ್ ರಾಹುಲ್ ಧರ್ಮಶಾಲಾ ಟೆಸ್ಟ್ ನಲ್ಲಿ ಅದ್ಭುತ ಎರಡು ಅರ್ಧಶತಕಗಳನ್ನು ಸಿಡಿಸಿದ್ದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ 11 ಸ್ಥಾನ ಮೇಲಕ್ಕೇರಿದ್ದಾರೆ. 
24 ವರ್ಷದ ಆಟಗಾರ ಕೆಎಲ್ ರಾಹುಲ್ ಆಸ್ಟ್ರೇಲಿಯಾ ವಿರುದ್ಧದ ನಾಲ್ಕು ಟೆಸ್ಟ್ ಪಂದ್ಯದಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ್ದರು. 64, 10, 90, 51, 67, 60 ಮತ್ತು 51 ರನ್ ಗಳನ್ನು ಸಿಡಿಸಿದ್ದರು. ಆ ಮೂಲಕ 6 ಅರ್ಧಶತಕ ಸಿಡಿಸಿದ್ದ ರಾಹುಲ್ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ 11ನೇ ಸ್ಥಾನಕ್ಕೆ ತಲುಪಿದ್ದಾರೆ.
ಟೀಂ ಇಂಡಿಯಾ ಆಟಗಾರ ಚೇತೇಶ್ವರ ಪೂಜಾರ ನಾಲ್ಕನೇ ಸ್ಥಾನದಲ್ಲಿದ್ದು ನಾಯಕ ವಿರಾಟ್ ಕೊಹ್ಲಿ 5ನೇ ಸ್ಥಾನದಲ್ಲಿದ್ದಾರೆ. ಇವರಿಬ್ಬರನ್ನು ಬಿಟ್ಟರೆ ಟೀಂ ಕೆಎಲ್ ರಾಹುಲ್ ಇಂಡಿಯಾದ ಮೂರನೇ ಅಗ್ರಮಾನ್ಯ ಆಟಗಾರ ಎನಿಸಿದ್ದಾರೆ. 
ಇನ್ನು ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್ ಗಳಾದ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಕ್ರಮವಾಗಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದ್ದಾರೆ. ಇನ್ನು ಧರ್ಮಶಾಲಾ ಟೆಸ್ಟ್ ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಉಮೇಶ್ ಯಾದವ್ 69ನೇ ಸ್ಥಾನದಿಂದ 29ನೇ ಸ್ಥಾನಕ್ಕೆ ತಲುಪಿದ್ದಾರೆ. 
SCROLL FOR NEXT