ಟೀಂ ಇಂಡಿಯಾ 
ಕ್ರಿಕೆಟ್

ಹೊಸ ಮೈಲಿಗಲ್ಲು: ಒಂಭತ್ತು ರಾಷ್ಟ್ರಗಳ ವಿರುದ್ಧದ ಟೆಸ್ಟ್ ಟ್ರೋಫಿಗಳು ಭಾರತದ ವಶದಲ್ಲೇ!

ಟೆಸ್ಟ್ ಇತಿಹಾಸದಲ್ಲಿ ಟೀಂ ಇಂಡಿಯಾ ಅಪರೂಪದ ಸಾಧನೆಯೊಂದನ್ನು ಮಾಡಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿ ಗೆಲುವಿನೊಂದಿಗೆ ಟೀಂ ಇಂಡಿಯಾ ಟೆಸ್ಟ್ ಮಾನ್ಯತೆ...

ಟೆಸ್ಟ್ ಇತಿಹಾಸದಲ್ಲಿ ಟೀಂ ಇಂಡಿಯಾ ಅಪರೂಪದ ಸಾಧನೆಯೊಂದನ್ನು ಮಾಡಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿ ಗೆಲುವಿನೊಂದಿಗೆ ಟೀಂ ಇಂಡಿಯಾ ಟೆಸ್ಟ್ ಮಾನ್ಯತೆ ಪಡೆದಿರುವ ಎಲ್ಲಾ ರಾಷ್ಟ್ರಗಳ ವಿರುದ್ಧ ಸರಣಿ ಕೈವಶ ಮಾಡಿಕೊಂಡಿದೆ. 
ಟೆಸ್ಟ್ ಮಾನ್ಯತೆ ಪಡೆದಿರುವ 9 ರಾಷ್ಟ್ರಗಳ ವಿರುದ್ಧವೂ ಟೀಂ ಇಂಡಿಯಾ ಸರಣಿ ಜಯಿಸಿದ್ದು ಈ ಎಲ್ಲ ಸರಣಿ ಗೆಲುವಿನ ಟ್ರೋಫಿಗಳು ಈಗ ಟೀಂ ಇಂಡಿಯಾದ ವಶದಲ್ಲಿದೆ. 
ಭಾರತ ಸರಣಿ ಗೆದ್ದಿರುವ 9 ರಾಷ್ಟ್ರಗಳ ಪಟ್ಟಿ:
* 2005ರಲ್ಲಿ ಜಿಂಬಾಬ್ವೆ ಪ್ರವಾಸ ಕೈಗೊಂಡಿದ್ದ ಭಾರತ 2-0 ಅಂತರದಿಂದ ಸರಣಿ ಕೈವಶ ಮಾಡಿಕೊಂಡಿತ್ತು. 
* 2007ರಲ್ಲಿ ಪಾಕಿಸ್ತಾನ ಭಾರತ ಪ್ರವಾಸ ಕೈಗೊಂಡಿತ್ತು. ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1-0 ಅಂತರದಿಂದ ಗೆದ್ದು ಸರಣಿ ಕೈವಶ ಮಾಡಿಕೊಂಡಿತು. 
* 2015ರಲ್ಲಿ ಶ್ರೀಲಂಕಾ ಪ್ರವಾಸಕೈಗೊಂಡಿದ್ದ ಭಾರತ ಲಂಕಾ ವಿರುದ್ಧ ಮೂರು ಟೆಸ್ಟ್ ಪಂದ್ಯಗಳನ್ನು ಆಡಿದ್ದು ಅದರಲ್ಲಿ ಮೊದಲ ಪಂದ್ಯ ಸೋಲಿನ ಬಳಿಕ ಇಳಿದೆರಡು ಪಂದ್ಯಗಳಲ್ಲಿ ಭಾರತ ಗೆಲ್ಲುವ ಮೂಲಕ ಸರಣಿ ಕೈವಶಮಾಡಿಕೊಂಡಿತು. 
* 2015ರಲ್ಲಿ ಭಾರತ ಪ್ರವಾಸ ಕೈಗೊಂಡಿದ್ದ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ನಾಲ್ಕು ಟೆಸ್ಟ್ ಪಂದ್ಯಗಳನ್ನು ಆಡಿದ್ದ ಟೀಂ ಇಂಡಿಯಾ ಇದರಲ್ಲಿ 3-0 ಅಂತರದಿಂದ ಗೆಲುವು ಸಾಧಿಸುವ ಮೂಲಕ ಸರಣಿ ಕೈವಶ ಮಾಡಿಕೊಂಡಿತ್ತು. 
* 2016ರಲ್ಲಿ ವೆಸ್ಟ್ ಇಂಡೀಸ್ ಪ್ರವಾಸ ಕೈಗೊಂಡಿದ್ದ ಭಾರತ ತಂಡ ವಿಂಡೀಸ್ ವಿರುದ್ಧ ನಾಲ್ಕು ಟೆಸ್ಟ್ ಪಂದ್ಯಗಳನ್ನು ಆಡಿತ್ತು. ಇದರಲ್ಲಿ 2 ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಟೀಂ ಇಂಡಿಯಾ ಐತಿಹಾಸ ಸರಣಿ ಜಯ ಸಾಧಿಸಿತು. 
* 2016ರಲ್ಲಿ ಭಾರತ ಪ್ರವಾಸ ಕೈಗೊಂಡಿದ್ದ ನ್ಯೂಜಿಲೆಂಡ್ ತಂಡದ ವಿರುದ್ಧ ಟೀಂ ಇಂಡಿಯಾ ಮೂರು ಟೆಸ್ಟ್ ಪಂದ್ಯಗಳನ್ನು ಆಡಿದ್ದು ಇದರಲ್ಲಿ ಮೂರು ಟೆಸ್ಟ್ ಪಂದ್ಯಗಳನ್ನು ಗೆಲುವ ಮೂಲಕ ಭಾರತ ನ್ಯೂಜಿಲೆಂಡ್ ತಂಡವನ್ನು ಕ್ಲೀನ್ ಸ್ವಿಪ್ ಮಾಡಿತ್ತು. 
* 2016ರಲ್ಲಿ ಭಾರತ ಪ್ರವಾಸದಲ್ಲಿದ್ದ ಇಂಗ್ಲೆಂಡ್ ತಂಡದ ವಿರುದ್ಧ ಟೀಂ ಇಂಡಿಯಾ ನಾಲ್ಕು ಪಂದ್ಯಗಳನ್ನು ಆಡಿತ್ತು. ಈ ಟೂರ್ನಿಯಲ್ಲೂ ಸಹ ಟೀಂ ಇಂಡಿಯಾ ಇಂಗ್ಲೆಂಡ್ ತಂಡವನ್ನು 4-0 ಅಂತರದಿಂದ ಸೋಲಿಸುವ ಮೂಲಕ ಇಂಗ್ಲೆಂಡ್ ತಂಡವನ್ನು ಕ್ಲೀನ್ ಸ್ವಿಪ್ ಮಾಡಿತ್ತು. 
* 2017ರಲ್ಲಿ ಭಾರತ ಪ್ರವಾಸ ಕೈಗೊಂಡಿದ್ದ ಬಾಂಗ್ಲಾದೇಶದ ವಿರುದ್ಧ ಏಕೈಕ ಟೆಸ್ಟ್ ಪಂದ್ಯವನ್ನು ಆಡಿದ್ದ ಭಾರತ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಕೈವಶ ಮಾಡಿಕೊಂಡಿತು. 
* ಇತ್ತೀಚೆಗಷ್ಟೇ ನಡೆದ ಆಸ್ಟ್ರೇಲಿಯಾ ವಿರುದ್ಧ ನಾಲ್ಕು ಟೆಸ್ಟ್ ಪಂದ್ಯಗಳ ಪೈಕಿ ಭಾರತ 2-1 ಅಂತರದಿಂದ ಆಸೀಸ್ ತಂಡವನ್ನು ಮಣಿಸಿ ದಿಗ್ವಿಜಯ ಸಾಧಿಸಿತು. ಮೊದಲ ಪಂದ್ಯದಲ್ಲಿ ಹೀನಾಯವಾಗಿ ಸೋತಿದ್ದ ಭಾರತ ನಂತರ ಬೆಂಗಳೂರಿನ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಗೆಲುವು ಸಾಧಿಸಿತ್ತು. ಇನ್ನು ಮೂರನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದ್ದರಿಂದ ಧರ್ಮಶಾಲಾದಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯ ಸರಣಿ ನಿರ್ಣಾಯಕ ಪಂದ್ಯವಾಗಿತ್ತು. ಈ ಪಂದ್ಯದಲ್ಲಿ 8 ವಿಕೆಟ್ ಗಳಿಂದ ಜಯ ಪಡೆಯುವ ಮೂಲಕ ಭಾರತ ಇತಿಹಾಸ ಬರೆದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video