ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮುಂಬೈ ಇಂಡಿಯನ್ಸ್ ಆಟಗಾರ ಹರ್ಭಜನ್ ಸಿಂಗ್ ಮತ್ತು ಗೀತಾ ಬಸ್ರ ಅವರ ಪುತ್ರಿ ಹಿನಯ ಜತೆಗಿನ ಸೆಲ್ಫಿಯನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ.
ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಮವಾರ ಸೆಣೆಸಿತ್ತು. ಈ ಪಂದ್ಯದಲ್ಲಿ ಆರ್ಸಿಬಿ ಸೋಲಿನ ಮೂಲಕ ಐಪಿಎಲ್ ಪ್ಲೇ ಆಫ್ ಕನಸು ನುಚ್ಚುನೂರಾಗಿದೆ. ಈ ಮಧ್ಯೆ ಟೀಂ ಇಂಡಿಯಾದ ಹಿರಿಯ ಆಟಗಾರ ಹರ್ಭಜನ್ ಸಿಂಗ್ ಕುಟುಂಬವನ್ನು ಭೇಟಿ ಮಾಡಿದ ವಿರಾಟ್ ಕೊಹ್ಲಿ ಹಿನಯ ಜತೆ ಸೆಲ್ಫಿ ಕ್ಲಿಕಿಸಿಕೊಂಡಿದ್ದು ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.