ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಟೀಂ ಇಂಡಿಯಾವನ್ನು ಕಳುಹಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ತೀರ್ಮಾನಿಸಿದೆ.
ದೆಹಲಿಯಲ್ಲಿ ಇಂದು ನಡೆದ ಬಿಸಿಸಿಐ ವಿಶೇಷ ಸಾಮಾನ್ಯ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ.
ಜೂನ್ 1ರಿಂದ ಇಂಗ್ಲೆಂಡ್ ನಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ. ಈಗಾಗಲೇ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲಿರುವ ಬಹುತೇಕ ತಂಡಗಳು ತಮ್ಮ ತಂಡಗಳನ್ನು ಪ್ರಕಟಿಸಿವೆ.
ಐಸಿಸಿಯ ನೂತನ ಆದಾಯ ಹಂಚಿಕೆ ನೀತಿಯನ್ನು ಪ್ರತಿಭಟಿಸಿದ್ದ ಬಿಸಿಸಿಐ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೆ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿರಲಿಲ್ಲ.