ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ತಾವು ತಂಗಿದ್ದ ಹೋಟೆಲ್ ನಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ಬಸ್ ನಲ್ಲಿ ಮೈದಾನಕ್ಕೆ ಪ್ರಯಾಣ ಬೆಳೆಸಿದರು.
ಸಾರ್ವಜನಿಕ ಸಾರಿಗೆ ಬಳಸುವ ಮೂಲಕ ಆರ್ಸಿಬಿ ಆಟಗಾರರು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿದರು. ಈ ಸುದ್ದಿ ತಿಳಿದ ಆರ್ಸಿಬಿ ನೂರಾರು ಅಭಿಮಾನಿಗಳು ಹೊಟೇಲ್ ಮುಂದೆ ಜಮಾಯಿಸಿದ್ದರು. ತಮ್ಮ ನೆಚ್ಚಿನ ಆಟಗಾರರನ್ನು ಸಮೀಪದಿಂದ ಕಂಡ ಅಭಿಮಾನಿಗಳು ಪುಳಕಗೊಂಡರು.
ಇನ್ನು ಕಳೆದ ಆವೃತ್ತಿಗಳಂತೆ ಈ ಬಾರಿಯೂ ಆರ್ಸಿಬಿ ಗ್ರೋ ಗ್ರೀನ್ ಅಭಿಯಾನ ನಡೆಸಿತು. ತಂಡದ ಆಟಗಾರರು ಭಾನುವಾರ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ಧ ಹಸಿರು ಜೆರ್ಸಿ ಧರಿಸಿ ಕಣಕ್ಕಿಳಿದ್ದರು. ತಂಡದ ಜೆರ್ಸಿ ಮರುಬಳಕೆ ಮಾಡಿದ ಪ್ಲಾಸ್ಟಿಕ್ ಬಾಟಲ್ ಗಳಿಂದ ಉತ್ಪಾದಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics