ಪೊಚೆಸ್ಟ್ರೋಮ್(ದಕ್ಷಿಣ ಆಫ್ರಿಕಾ): ಟೀಂ ಇಂಡಿಯಾ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಜೂಲನ್ ಗೋಸ್ವಾಮಿ ಏಕದಿನ ಕ್ರಿಕೆಟ್ ನಲ್ಲಿ ಗರಿಷ್ಠ ವಿಕೆಟ್ ಉರುಳಿಸಿ ವಿಶ್ವದಾಖಲೆ ಮಾಡಿದ್ದಾರೆ.
ಮಹಿಳೆಯರ ಏಕದಿನ ಕ್ರಿಕೆಟ್ ನಲ್ಲಿ ಈ ಹಿಂದೆ ಅತೀ ಹೆಚ್ಚು ವಿಕೆಟ್ ಪಡೆದ ಸಾಧನೆಯನ್ನು ಆಸ್ಟ್ರೇಲಿಯಾದ ಮಾಜಿ ಆಟಗಾರ್ತಿ ಕ್ಯಾಥರಿನ್ ಫಿಟ್ಜ್ ಪ್ಯಾಟ್ರಿಕ್ ರ ಹೆಸರಲಿತ್ತು. ಒಟ್ಟು 180 ವಿಕೆಟ್ ಗಳನ್ನು ಕಬಳಿಸಿ ಕ್ಯಾಥರಿನ್ ಅಗ್ರಸ್ಥಾನದಲ್ಲಿದ್ದರು. ಇದೀಗ ಜೂಲನ್ ಗೋಸ್ವಾಮಿ ಅವರು 181 ವಿಕೆಟ್ ಗಳನ್ನು ಪಡೆಯುವ ಮೂಲಕ ಕ್ಯಾಥರಿನ್ ದಾಖಲೆಯನ್ನು ಹಿಂದಿಕ್ಕಿದ್ದಾರೆ.
ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಏಕದಿನ ಸರಣಿಯಲ್ಲಿ ಜೂಲನ್ ಗೋಸ್ವಾಮಿಗೆ ವಿಶ್ವದಾಖಲೆ ಮಾಡಲು ಇನ್ನು ಮೂರು ವಿಕೆಟ್ ಗಳ ಅವಶ್ಯಕತೆ ಇತ್ತು. ಈ ವೇಳೆ ಆಫ್ರಿಕಾ ತಂಡದ ವಿರುದ್ಧದ ಪಂದ್ಯದಲ್ಲಿ 34 ರನ್ ಗಳಿಗೆ 3 ವಿಕೆಟ್ ಕೆಡವಿದರು. ಇದರೊಂದಿಗೆ ಗೋಸ್ವಾಮಿ ಅಗ್ರಸ್ಥಾನಕ್ಕೇರಿದ್ದಾರೆ.
2002ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ್ದ 34 ವರ್ಷದ ಜೂಲನ್ ಗೋಸ್ವಾಮೀ 153 ಏಕದಿನ ಪಂದ್ಯಗಳನ್ನು ಆಡಿದ್ದಾರೆ.