ಮೊಹಾಲಿ: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯ ಪ್ಲೇ-ಆಫ್ ಗೆ ಹಾದಿ ಸುಗಮಗೊಳಿಸಿಕೊಳ್ಳುವ ಮಾಡು ಇಲ್ಲವೆ ಮಡಿ ಹೋರಾಟದಲ್ಲಿ ಸಂಘಟಿತ ನಿರ್ವಹಣೆ ತೋರಿದ ಕಿಂಗ್ಸ್ ಇಲೆವೆನ್ ಪಂಜಾಬ್ ಗೆಲುವು ಸಾಧಿಸಿದೆ.
ಮೊದಲು ಬ್ಯಾಟಿಂಗ್ ಕಿಂಗ್ಸ್ ಇಲೆವೆನ್ ಪಂಜಾಬ್ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತು. 168 ರನ್ ಗಳ ಗುರಿ ಬೆನ್ನಟ್ಟಿದ ಕೋಲ್ಕತ್ತಾ ನೈಟ್ ರೈಡರ್ಸ್ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 153 ರನ್ ಪೇರಿಸಲಷ್ಟೇ ಸಾಧ್ಯವಾಯಿತು. ಇದರೊಂದಿಗೆ ಕೆಕೆಆರ್ ತಂಡ 14 ರನ್ ಗಳಿಂದ ಪಂಜಾಬ್ ಗೆ ಶರಣಾಯಿತು.
ಪಂಜಾಬ್ ತಂಡದ ಯುವ ಸ್ಪಿನ್ನರ್ ರಾಹುಲ್ ತೆವಾಟಿಯಾ ಮತ್ತು ಮೋಹಿತ್ ಶರ್ಮಾ ಬೌಲಿಂಗ್ ದಾಳಿಗೆ ಕೆಕೆಆರ್ ತಂಡ ಸೋಲು ಕಂಡಿತು. ಸದ್ಯ 12 ಅಂಕಗಳೊಂದಿಗೆ ಪಂಜಾಬ್ ತಂಡ ಪ್ಲೇ-ಆಫ್ ಅವಕಾಶವನ್ನು ಜೀವಂತವಾಗಿರಿಸಿಕೊಂಡಿದೆ.