ವಿರಾಟ್ ಕೊಹ್ಲಿ 
ಕ್ರಿಕೆಟ್

ಐಪಿಎಲ್ 10ನೇ ಆವೃತ್ತಿಯಲ್ಲಿ ವಿರಾಟ್ ಕೊಹ್ಲಿ ಸಾಧನೆ ಶೂನ್ಯ: ರಿಕಿ ಪಾಂಟಿಂಗ್

ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ಕಳೆದ ಆವೃತ್ತಿಯಲ್ಲಿ ರನ್ ಸುರಿಮಳೆಗರೆದಿದ್ದು ಪ್ರಸಕ್ತ ಐಪಿಎಲ್ ನಲ್ಲಿ ಅವರು ಶೂನ್ಯ...

ನವದೆಹಲಿ: ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ಕಳೆದ ಆವೃತ್ತಿಯಲ್ಲಿ ರನ್ ಸುರಿಮಳೆಗರೆದಿದ್ದು ಪ್ರಸಕ್ತ ಐಪಿಎಲ್ ನಲ್ಲಿ ಅವರು ಶೂನ್ಯ ಸಾಧನೆ ಮಾಡಿದ್ದಾರೆ ಎಂದು ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ಟೀಕಿಸಿದ್ದಾರೆ. 
ಈ ಬಾರಿ ವಿರಾಟ್ ಕೊಹ್ಲಿ ಗಾಯಗೊಂಡಿದ್ದು ಆರಂಭಿಕ ಪಂದ್ಯಗಳನ್ನು ಆಡಿರಲಿಲ್ಲ. ನಂತರ ತಂಡಕ್ಕೆ ವಾಪಸ್ ಆಗಿದ್ದರು ಇಲ್ಲಿಯವರೆಗೆ ಕೊಹ್ಲಿ ಆಡಿದ 9 ಪಂದ್ಯಗಳಲ್ಲಿ 3 ಅರ್ಧಶತಕ ಸೇರಿದಂತೆ 250 ರನ್ ಬಾರಿಸಿದ್ದಾರೆ. ಆದರೆ 2016ರ ಆವೃತ್ತಿಯಲ್ಲಿ ಕೊಹ್ಲಿ ಭರ್ಜರಿ ಪ್ರದರ್ಶನ ನೀಡಿ ರನ್ ಗಳಿಕೆಯಲ್ಲಿ ಅಗ್ರಸ್ಥಾನದಲ್ಲಿದ್ದರು.
ಆರ್ಸಿಬಿ ತಂಡದ ಸ್ಟಾರ್ ಬ್ಯಾಟ್ ಮನ್ ಗಳಾದ ವಿರಾಟ್ ಕೊಹ್ಲಿ, ಎಬಿಡಿವಿಲಿಯರ್ಸ್, ಕ್ರಿಸ್ ಗೇಯ್ಲ್ ಅವರ ವೈಫಲ್ಯ ಕೂಡ ಅಸ್ಥಿತ ಪ್ರದರ್ಶನ ನೀಡಿದ್ದಾರೆ. ಕಳೆದ ಬಾರಿಯ ಟೂರ್ನಿಯಲ್ಲಿ ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ ಜೋಡಿ ಯಶಸ್ಸು ಸಾಧಿಸಿದ್ದರು. ಆದರೆ ಈ ಬಾರಿ ರಾಹುಲ್ ಅನುಪಸ್ಥಿತಿ ತಂಡವನ್ನು ವ್ಯಾಪಕವಾಗಿ ಕಾಡಿತ್ತು. ನನ್ನ ಪ್ರಕಾರ ರಾಹುಲ್ ಗಾಯಗೊಂಡಿದ್ದು, ಆರ್ ಸಿಬಿಗೆ ದೊಡ್ಡ ಹೊಡೆತವಾಗಿತ್ತು. ರಾಹುಲ್ ಅನುಪಸ್ಥಿತಿಯೆ ಇಂದಿನ ಆರ್ ಸಿಬಿ ತಂಡದ ಪರಿಸ್ಥಿತಿಗೆ ಕಾರಣ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ