ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ಟೀಂ ಇಂಡಿಯಾ ಸಜ್ಜು: ವಿರಾಟ್ ಕೊಹ್ಲಿ
ಇಂಗ್ಲೆಂಡ್ ನಲ್ಲಿ ಜೂನ್ 1ರಿಂದ ಆರಂಭಗೊಳ್ಳಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ನಮ್ಮ ತಂಡ ಸಿದ್ಧವಾಗಿದೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್...
ಮುಂಬೈ: ಇಂಗ್ಲೆಂಡ್ ನಲ್ಲಿ ಜೂನ್ 1ರಿಂದ ಆರಂಭಗೊಳ್ಳಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ನಮ್ಮ ತಂಡ ಸಿದ್ಧವಾಗಿದೆ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಚಾಂಪಿಯನ್ಸ್ ಟ್ರೋಫಿ ಕುರಿತಂತೆ ಮುಂಬೈನಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ವಿರಾಟ್ ಕೊಹ್ಲಿ, ಭಾರತ ಹಾಲಿ ಚಾಂಪಿಯನ್ ಆಗಿದ್ದು ಈ ಬಾರಿಯೂ ಟೈಟಲ್ ಗೆದ್ದು ಇತಿಹಾಸ ನಿರ್ಮಿಸುತ್ತೇವೆ. ನಮ್ಮ ತಂಡ ಸದೃಢವಾಗಿದೆ. ಆಯ್ಕೆಯಾಗಿರುವ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.
ಕಳೆದ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್)ನಲ್ಲಿ ಭಾರತೀಯ ಆಟಗಾರರು ಉತ್ತಮವಾಗಿ ಆಡಿದ್ದಾರೆ. ಉತ್ತಮ ಪ್ರದರ್ಶನದ ಮೂಲಕ ತಂಡದ ಆಟಗಾರರ ಆತ್ಮವಿಶ್ವಾಸ ವೃದ್ಧಿಸಿದೆ ಎಂದರು.
ಭಾರತ ಇದುವರೆಗೂ ಎರಡು ಬಾರಿ ಚಾಂಪಿಯನ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಈ ಬಾರಿಯೂ ನಾವು ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದು ಬೀಗುತ್ತೇವೆ ಎಂದು ಹೇಳಿದ್ದಾರೆ.
ಇನ್ನು ಟೂರ್ನಿಯ ಮೊದಲ ಪಂದ್ಯ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧವಾಗಿದ್ದು ಎಂದಿನಂತೆ ನಮ್ಮ ತಂತ್ರಗಾರಿಕೆ ಬದಲಾಗಲ್ಲ. ಇನ್ನಿತರ ತಂಡಗಳಾದ ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧ ನಾವು ಆಡುವಂತೆ ಪಾಕಿಸ್ತಾನದ ವಿರುದ್ಧವು ಆಡುತ್ತೇವೆ ಎಂದು ವಿರಾಟ್ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.