ನವದೆಹಲಿ: ಟ್ರಾಲ್ ನಲ್ಲಿ ನಡೆಸಲಾದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಸಬ್ಜಾರ್ ಭಟ್ ನನ್ನು ಹತ್ಯೆ ಸಂಬಂಧ ಭಾರತೀಯ ಸೇನೆಗೆ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಭಾರತೀಯ ಸೇನೆಗೆ ಗೌರವ ಸಮರ್ಪಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸೆಹ್ವಾಗ್ ಇಂದು ಭಾರತೀಯ ಸೇನೆ ಅತಿದೊಡ್ಡ ಕೆಲಸ ಮಾಡಿದೆ ಎಂದು ಕೊಂಡಾಡಿದ್ದಾರೆ. ಉಗ್ರರು ಹಾಗೂ ನುಸುಳುಕೋರರನ್ನು ಮಟ್ಟಹಾಕಲು ಮುಂದಾಗಿದ್ದಭದ್ರತಾ ಪಡೆಗಳು 2 ಪ್ರತ್ಯೇಕ ಎನ್ ಕೌಂಟರ್ ಗಳನ್ನು ನಡೆಸಿತ್ತು.
ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಕಮಾಂಡರ್ ಸಬ್ಜಾರ್ ಭಟ್ ಅಲಿಯಾಸ್ ಅಬು ಜರಾರ್ ಸೇರಿ 8 ಮಂದಿ ಉಗ್ರರನ್ನು ಎನ್ ಕೌಂಟರ್ ನಲ್ಲಿ ಹೊಡೆದುರುಳಿಸಲಾಗಿತ್ತು.
ಪುಲ್ವಾಮಾ ಜಿಲ್ಲೆಯ ಟ್ರಾಲ್ ಸೆಕ್ಟರ್ ನ ಕಟ್ಟಡವೊಂದರಲ್ಲಿ ಅಡಗಿ ಕುಳಿತಿದ್ದ ಇಬ್ಬರು ಉಗ್ರರು ಭಾರತೀಯ ಸೇನಾ ಪಡೆ ದಾಳಿಗೆ ಬಲಿಯಾಗಿದ್ದಾರೆ. ಬಾರಾಮುಲ್ಲಾ ಜಿಲ್ಲೆಯ ರಾಂಪುರ್ ಸೆಕ್ಟರ್ ನ ಗಡಿ ನಿಯಂತ್ರಣ ರೇಖೆ ಬಳಿ ಭಾರತದೊಳಕ್ಕೆ ನುಸುಳಲು ಯತ್ನಿಸಿದ್ದ ಆರು ಮಂದಿ ಉಗ್ರರನ್ನು ಭಾರತೀಯ ಸೇನಾ ಪಡೆ ಗುಂಡಿಟ್ಟು ಹತ್ಯೆ ಮಾಡಿದೆ.