ಟೀಂ ಇಂಡಿಯಾದ ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ತೀವ್ರ ಜ್ವರದಿಂದ ಬಳಲುತ್ತಿದ್ದು ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಮೊದಲ ಅಭ್ಯಾಸ ಪಂದ್ಯದಲ್ಲಿ ಆಡುತ್ತಿಲ್ಲ.
ಯುವರಾಜ್ ಸಿಂಗ್ ವಿಪರೀತ ಜ್ವರದಿಂದ ನರಳುತ್ತಿದ್ದು, ಅವರು ಗುಣಮುಖರಾಗಲು ಇನ್ನು ಒಂದೆರಡು ದಿನಗಳ ಬೇಕಾಗಬಹುದು ಎಂದು ತಂಡದ ಆಡಳಿತ ಮಂಡಳಿ ತಿಳಿಸಿದೆ.
ಐಪಿಎಲ್ ಸಹಿತ ದೇಶಿ ಕ್ರಿಕೆಟ್ ನಲ್ಲಿ ಸಾಕಷ್ಟು ಪಂದ್ಯಗಳನ್ನಾಡಿರುವ ಯುವರಾಜ್ ಸಿಂಗ್ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದು ಅವರಿಗೆ ಇದೇನು ಅನಿವಾರ್ಯವಾದ ಅಭ್ಯಾಸ ಪಂದ್ಯವಲ್ಲ. ಆದರೆ ಇಂಗ್ಲೆಂಡ್ ವಾತಾವರಣಕ್ಕೆ ಹೊಂದಿಕೊಳ್ಳುವುದು ಅತೀ ಅಗತ್ಯ ಎಂಬ ಕಾರಣಕ್ಕಾಗಿ ಎಲ್ಲ ಕ್ರಿಕೆಟಿಗರೂ ಅಭ್ಯಾಸ ಪಂದ್ಯದಲ್ಲಿ ಪಾಲ್ಗೊಳ್ಳಬೇಕೆಂಬುದು ಬಿಸಿಸಿಐ ನಿರ್ಧಾರ ಎಂದು ಹೇಳಿದ್ದಾರೆ.
ಪ್ರತಿಯೊಂದು ಅಭ್ಯಾಸ ಪಂದ್ಯದಲ್ಲೂ ಹನ್ನೊಂದರ ಬದಲು 15 ಆಟಗಾರರಿಗೆ ಆಡುವ ಅವಕಾಶವನ್ನು ಕಲ್ಪಿಸಲಾಗಿದೆ. ಯುವರಾಜ್ ಸಿಂಗ್ ಬಾಂಗ್ಲಾ ಎದುರಿನ ಮೇ 30ರ ದ್ವಿತೀಯ ಅಭ್ಯಾಸ ಪಂದ್ಯದಲ್ಲೂ ಆಡುವುದು ಖಚಿತವಾಗಿಲ್ಲ ಎಂದು ಮಂಡಳಿ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics