ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ 
ಕ್ರಿಕೆಟ್

ಟೀಂ ಇಂಡಿಯಾ ಮ್ಯಾನೇಜರ್ ಆಗಿ ಕನ್ನಡಿಗ, ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಆಯ್ಕೆ?

ಮಹತ್ವದ ಬೆಳವಣಿಗೆಯಲ್ಲಿ ಟೀಂ ಇಂಡಿಯಾ ಮ್ಯಾನೇಜರ್ ಹುದ್ದೆಗೆ ಮಾಜಿ ಕ್ರಿಕೆಟಿಗ ಹಾಗೂ ಕರ್ನಾಟಕದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಸಂದರ್ಶನ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಮುಂಬೈ: ಮಹತ್ವದ ಬೆಳವಣಿಗೆಯಲ್ಲಿ ಟೀಂ ಇಂಡಿಯಾ ಮ್ಯಾನೇಜರ್ ಹುದ್ದೆಗೆ ಮಾಜಿ ಕ್ರಿಕೆಟಿಗ ಹಾಗೂ ಕರ್ನಾಟಕದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಸಂದರ್ಶನ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಸುದ್ದಿಸಂಸ್ಥೆಯೊಂದು ವರದಿ ಮಾಡಿರುವಂತೆ ಕೋಚ್ ರವಿಶಾಸ್ತ್ರಿ ನೇಮಕದ ಬಳಿಕ ನೆನೆಗುದಿಗೆ ಬಿದ್ದಿದ್ದ ಟೀಂ ಇಂಡಿಯಾ ಮ್ಯಾನೇಜರ್ ಹುದ್ದೆಯ ಆಯ್ಕೆಗೆ ಸಂಬಂಧಿಸಿದಂತೆ ಬಿಸಿಸಿಐ ಸಂದರ್ಶನ ನಡೆಸಿದ್ದು, ಈ ಸಂದರ್ಶನಕ್ಕೆ  ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಹಾಜರಾಗಿದ್ದರು ಎಂದು ಹೇಳಲಾಗಿದೆ. ವಿಶೇಷವೆಂದರೆ ಮ್ಯಾನೇಜರ್ ಹುದ್ದೆಗೆ ಬಿಸಿಸಿಐ ನಡೆಸಿದ ಸಂದರ್ಶನಕ್ಕೆ ಹಾಜರಾದ ಏಕೈಕ ವ್ಯಕ್ತಿ ವೆಂಕಟೇಶ್ ಪ್ರಸಾದ್ ಎಂದು ಹೇಳಲಾಗಿದೆ.  ಹೀಗಾಗಿ ಟೀಂ ಇಂಡಿಯಾ ಜನರಲ್ ಮ್ಯಾನೇಜರ್ ಆಗಿ ವೆಂಕಟೇಶ್ ಪ್ರಸಾದ್ ಆಯ್ಕೆ ಖಚಿತ ಎಂದೂ ಹೇಳಲಾಗುತ್ತಿದೆ.
ಈ ಹಿಂದೆ ಟೀಂ ಇಂಡಿಯಾ ಕೋಚ್ ಹುದ್ದೆಗೆ ಆಯ್ಕೆ ನಡೆದ ಸಂದರ್ಭದಲ್ಲಿ ವೆಂಕಟೇಶ್ ಪ್ರಸಾದ್ ಅವರ ಹೆಸರು ಬಲವಾಗಿ ಕೇಳಿಬಂದಿತ್ತು. ಆದರೆ ಕಾರಣಾಂತರಗಳಿಂದ ಪ್ರಸಾದ್ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲಾಗಲಿಲ್ಲ. ಇದೀಗ  ಮತ್ತೆ ಪ್ರಸಾದ್ ಟೀಂ ಇಂಡಿಯಾ ಬಳಗ ಸೇರುವ ಕಾಲ ಸನ್ನಿಹಿತವಾಗಿದ್ದು, ತಂಡದ ಮ್ಯಾನೇಜರ್ ಆಗಿ ಟೀಂ ಇಂಡಿಯಾ ನಿರ್ವಹಣೆಯಲ್ಲಿ ಕೋಚ್ ರವಿಶಾಸ್ತ್ರಿ ಅವರಿಗೆ ಸಾಥ್ ನೀಡಲಿದ್ದಾರೆ.
ತ್ರಿಮೂರ್ತಿಗಳ ಫೇವರಿಟ್ ಆಗಿದ್ದ ವೆಂಕಿ
ಇನ್ನು ಈ ಹಿಂದೆ ಟೀಂ ಇಂಡಿಯಾ ಕೋಚ್ ಆಗಿದ್ದ ಅನಿಲ್ ಕುಂಬ್ಳೆ ತಮ್ಮ ಸ್ಥಾನ ತೊರೆದ ಬಳಿಕ ವೆಂಕಟೇಶ್ ಪ್ರಸಾದ್ ಅವರನ್ನು ಕೋಚ್ ಆಗಿ ಆಯ್ಕೆ ಮಾಡಬಹುದು ಎಂದು ಹೇಳಲಾಗುತ್ತಿತ್ತು. ಆ ಸಂದರ್ಭದಲ್ಲಿ ಸ್ವತಃ ಭಾರತ  ಕ್ರಿಕೆಟ್ ತಂಡದ ತ್ರಿಮೂರ್ತಿ ಸಲಹೆಗಾರರಾಗಿದ್ದ ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ ಹಾಗೂ ವಿವಿಎಸ್ ಲಕ್ಷ್ಮಣ್ ಅವರು ವೆಂಕಟೇಶ್ ಪ್ರಸಾದ್ ಅವರ ಪರ ಒಲವು ಹೊಂದಿದ್ದರು. ಆದರೆ ಕೊನೆಯ ಕ್ಷಣದಲ್ಲಿ ವೆಂಕಿ ಹಿಂದೆ  ಸರಿದಿದ್ದರಿಂದ ರವಿಶಾಸ್ತ್ರಿ ಅವರ ಹಾದಿ ಸುಗಮವಾಗಿತ್ತು ಎಂದು ಹೇಳಲಾಗಿದೆ.
ಒಟ್ಟಾರೆ ಈ ಹಿಂದೆ ತಂಡದ ಬೌಲಿಂಗ್ ಕೋಚ್ ಅಗಿದ್ದ ಪ್ರಸಾದ್ ಮತ್ತೆ ಮ್ಯಾನೇಜರ್ ರೂಪದಲ್ಲಿ ಮತ್ತೆ ತಂಡಕ್ಕೆ ವಾಪಸ್ ಆದರೆ ಭಾರತ ಕ್ರಿಕೆಟ್ ತಂಡದ ಸಾಮರ್ಥ್ಯ ಮತ್ತಷ್ಟು ಹೆಚ್ಚುವುದರಲ್ಲಿ ಎರಡು ಮಾತಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!