ರಣಜಿ ಕ್ರಿಕೆಟ್:: ಮಹಾರಾಷ್ಟ್ರದ ಎದುರು ಕರ್ನಾಟಕಕ್ಕೆ ಜಯ 
ಕ್ರಿಕೆಟ್

ರಣಜಿ ಟ್ರೋಫಿ ಕ್ರಿಕೆಟ್: ಮಹಾರಾಷ್ಟ್ರ ವಿರುದ್ಧ ಕರ್ನಾಟಕಕ್ಕೆ ಇನ್ನಿಂಗ್ಸ್ ಜಯ

ಪುಣೆಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಎ ಗುಂಪಿನ ಮೂರನೇ ಪಂದ್ಯದಲ್ಲಿ ಮಹಾರಾಷ್ಟ್ರ ವಿರುದ್ಧ ಕರ್ನಾಟಕ ಇನ್ನಿಂಗ್ಸ್ ಮತ್ತು 136 ರನ್ ಅಂತರದ ಭರ್ಜರಿ ಜಯ ದಾಖಲಿಸಿದೆ.

ಪುಣೆ: ಪುಣೆಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಎ ಗುಂಪಿನ ಮೂರನೇ ಪಂದ್ಯದಲ್ಲಿ ಮಹಾರಾಷ್ಟ್ರ ವಿರುದ್ಧ ಕರ್ನಾಟಕ ಇನ್ನಿಂಗ್ಸ್ ಮತ್ತು 136 ರನ್ ಅಂತರದ ಭರ್ಜರಿ ಜಯ ದಾಖಲಿಸಿದೆ. ಕರ್ನಾಟಕದ ವೇಗದ ಬೌಲರ್ ಅಭಿಮನ್ಯು ಮಿಥುನ್‍ರ ಬೌಲಿಂಗ್ ದಾಳಿಗೆ ನಲುಗಿದ ಮಹಾರಾಷ್ಟ್ರ ತಂಡ ಸೋಲೊಪ್ಪಿಕೊಂಡಿದೆ. ಇದೇ ವೇಳೆ ಆಡಿರುವ ಮೂರು ಪಂದ್ಯಗಳಲ್ಲಿಯೂ ವಿಜಯ ದಾಖಲಿಸಿರುವ ಕರ್ನಾಟಕಗ್ರಸ್ಥಾನ ತನ್ನದಾಗಿಸಿಕೊಂಡಿದೆ.
ಪಂದ್ಯದ ಅಂತಿಮ ದಿನವಾದ ಇಂದು ಆಟ ಮುಂದುವರಿಸಿದ ಮಹಾರಾಷ್ಟ್ರ 247 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಗಳನ್ನು ಕಳೆದುಕೊಂಡಿತು. ಕರ್ನಾಟಕದ ಅಭಿಮನ್ಯು ಮಿಥುನ್ 5 ವಿಕೆಟ್ ಪಡೆದು ಮಿಂಚಿದರು. 
ಇದಕ್ಕೂ ಮುನ್ನ ಮೊದಲ ಇನ್ನಿಂಗ್ಸ್ ನಲ್ಲಿ ಸಹ 245 ರನ್ ಗಳಿಗೆ ಸರ್ವಪತನವಾಗಿದ್ದ ಮಹಾರಾಷ್ಟ್ರದವರ ಆಟಕ್ಕೆ ಉತ್ತರವಾಗಿ ಕರ್ನಾಟಕ ಐದು ವಿಕೆಟ್ ನಷ್ಟಕ್ಕೆ 628  ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಇದರೊಡನೆ ಇನ್ನಿಂಗ್ಸ್ ನಲ್ಲಿ 383 ರನ್ ಮುನ್ನಡೆ ಸಾಧಿಸಿತ್ತು.
ಸ್ಕೋರ್ ವಿವರ:
ಮಹಾರಾಷ್ಟ್ರ ಮೊದಲ ಇನ್ನಿಂಗ್ಸ್: 245 ರನ್, ದ್ವಿತೀಯ ಇನ್ನಿಂಗ್ಸ್ 247 ರನ್, ಕರ್ನಾಟಕ ಮೊದಲ ಇನ್ನಿಂಗ್ಸ್:628/5 ಡಿಕ್ಲೇರ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT