ಕ್ರಿಕೆಟ್

ಟೀಂ ಇಂಡಿಯಾ ಮಾಜಿ ನಾಯಕ ಧೋನಿ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವುದು ಒಳ್ಳೆಯದ್ದು: ಲಕ್ಷ್ಮಣ್

Vishwanath S
ನವದೆಹಲಿ: ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ವಿದಾಯ ಘೋಷಿಸುವುದು ಒಳ್ಳೆಯದ್ದು ಎಂದು ಟೀಂ ಇಂಡಿಯಾದ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಅಭಿಪ್ರಾಯಪಟ್ಟಿದ್ದಾರೆ. 
ಟಿ20 ಮಾದರಿಗೆ ವಿದಾಯ ಘೋಷಿಸುವ ಮೂಲಕ ಯುವ ಕ್ರಿಕೆಟಿಗರಿಗೆ ಅವಕಾಶ ನೀಡಬೇಕು. ಟಿ20 ಬದಲಿಗೆ ಏಕದಿನ ಕ್ರಿಕೆಟ್ಗೆನಲ್ಲಿ ಧೋನಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ ಎಂದು ಲಕ್ಷ್ಮಣ್ ಹೇಳಿದ್ದಾರೆ. 
ನ್ಯೂಜಿಲೆಂಡ್ ವಿರುದ್ಧ ರಾಜ್ಕೋಟ್ ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಧೋನಿ ಅವರ ನಿಧಾನಗತಿಯ ಬ್ಯಾಟಿಂಗ್ ನಿಂದಾಗಿ ಪಂದ್ಯವನ್ನು ತಂಡ ಸೋಲಬೇಕಾಯಿತು ಎಂಬ ಟೀಕೆಗಳು ಕೇಳಿಬಂದಿದ್ದವು. ಪಂದ್ಯದ ಬಳಿಕ ಮಾತನಾಡಿದ ಲಕ್ಷ್ಮಣ್ ಸಹ ಧೋನಿ ಟಿ20 ಕ್ರಿಕೆಟ್ಗೆ ವಿದಾಯ ಘೋಷಿಸುವುದು ಒಳ್ಳೆಯದ್ದು ಎಂದು ಹೇಳಿದ್ದಾರೆ. 
ಧೋನಿ ಮೈದಾನದಲ್ಲಿ ಹೊಂದಿಕೊಳ್ಳಲು ಹೆಚ್ಚು ಸಮಯ ತೆಗೆದುಕೊಳ್ಳುತ್ತಾರೆ. ನ್ಯೂಜಿಲೆಂಡ್ ವಿರುದ್ಧದ ಎರಡನೇ ಪಂದ್ಯ ಇದಕ್ಕೆ ಉತ್ತಮ ಉದಾಹರಣೆ. ಕೊಹ್ಲಿಗೆ ಸ್ಟ್ರೈಕ್ ನೀಡಲು ಧೋನಿ ಪ್ರಯತ್ನಿಸುತ್ತಿದ್ದರು. ಈ ಹಂತದಲ್ಲಿ ಕೊಹ್ಲಿಯ ಸ್ಟ್ರೈಕ್ ರೇಟ್ 160 ಇದ್ದರೆ ಧೋನಿಯದ್ದು 80 ಇತ್ತು. ಭಾರತ ಬೃಹತ್ ಮೊತ್ತ ಬೆನ್ನಟ್ಟುವಾಗ ಈ ರೀತಿಯ ಬ್ಯಾಟಿಂಗ್ ಒಳ್ಳೆಯದಲ್ಲ ಎಂದು ಲಕ್ಷ್ಮಣ್ ಹೇಳಿದ್ದಾರೆ. 
SCROLL FOR NEXT