ನವದೆಹಲಿ: ಪ್ರವಾಸಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಟೀಂ ಇಂಡಿಯಾದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಲಾಗಿದೆ.
ಹಾರ್ದಿಕ್ ಪಾಂಡ್ಯ ತಂಡದಲ್ಲಿ ಬ್ಯಾಕ್ ಟು ಬ್ಯಾಕ್ ಸರಣಿಗಳಲ್ಲಿ ಆಡುತ್ತಿದ್ದು ಎಲ್ಲಿ ಅವರು ಗಂಭೀರ ಗಾಯಗಳಿಗೆ ಒಳಗಾಗುತ್ತಾರೋ ಎಂಬ ಆತಂಕದಿಂದ ಆಯ್ಕೆ ಸಮಿತಿ ಹಾರ್ದಿಕ್ ಪಾಂಡ್ಯರನ್ನು ಲಂಕಾ
ವಿರುದ್ಧದ ಸರಣಿಯಿಂದ ಹೊರಗಿಟ್ಟಿದ್ದು ಲಂಕಾ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾ ತಂಡವನ್ನು ಆಯ್ಕೆ ಮಾಡಿದೆ.
ವಿರಾಟ್ ಕೊಹ್ಲಿ(ನಾಯಕ), ಕೆಎಲ್ ರಾಹುಲ್, ಮುರಳಿ ವಿಜಯ್, ಶಿಖರ್ ಧವನ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ರೋಹಿತ್ ಶರ್ಮಾ, ವೃದ್ಧಿಮಾನ್ ಸಹಾ, ಆರ್ ಅಶ್ವಿನ್, ರವಿಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಭುವನೇಶ್ವರ್ ಕುಮಾರ್, ಇಶಾಂತ್ ಶರ್ಮಾ.