ಸೌರವ್ ಗಂಗೂಲಿ-ವಿರಾಟ್ ಕೊಹ್ಲಿ 
ಕ್ರಿಕೆಟ್

ಗಂಗೂಲಿ ಮತ್ತೊಂದು ದಾಖಲೆಯನ್ನು ಮುರಿತಾರಾ ವಿರಾಟ್ ಕೊಹ್ಲಿ!

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾಯಕರಾಗಿ ಮಾಜಿ ಟೀಂ ಇಂಡಿಯಾ ನಾಯಕ ಸೌರವ್ ಗಂಗೂಲಿ ಅವರ ಮತ್ತೊಂದು ದಾಖಲೆನ್ನು ಮುರಿಯುವ...

ಕೋಲ್ಕತ್ತಾ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾಯಕರಾಗಿ ಮಾಜಿ ಟೀಂ ಇಂಡಿಯಾ ನಾಯಕ ಸೌರವ್ ಗಂಗೂಲಿ ಅವರ ಮತ್ತೊಂದು ದಾಖಲೆನ್ನು ಮುರಿಯುವ ಸನ್ನಾಹದಲ್ಲಿದ್ದಾರೆ. 
ಹೌದು ಶ್ರೀಲಂಕಾ ಸದ್ಯ ಮೂರು ಟೆಸ್ಟ್ ಪಂದ್ಯಗಳ ಸರಣಿಗಾಗಿ ಭಾರತಕ್ಕೆ ಬಂದಿದ್ದು ನವೆಂಬರ್ 16ರಿಂದ ಮೊದಲ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದೆ. ಇನ್ನು ಟೀಂ ಇಂಡಿಯಾದ ಟೆಸ್ಟ್ ತಂಡದ ನಾಯಕತ್ವ ವಹಿಸಿಕೊಂಡ ನಂತರ ವಿರಾಟ್ ಕೊಹ್ಲಿ 29 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದಾರೆ. ಇದರಲ್ಲಿ 19 ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. 
ಟೀಂ ಇಂಡಿಯಾದ ಟೆಸ್ಟ್ ಇತಿಹಾಸದ ಅತ್ಯಂತ ಯಶಸ್ವಿ ನಾಯಕನೆಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಮಹೇಂದ್ರ ಸಿಂಗ್ ಧೋನಿ 60 ಟೆಸ್ಟ್ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದು ಅದರಲ್ಲಿ 27 ಪಂದ್ಯಗಳಲ್ಲಿ ಜಯ ಗಳಿಸುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ. ನಂತರ ಸೌರವ್ ಗಂಗೂಲಿ 49 ಪಂದ್ಯಗಳಲ್ಲಿ 21 ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ. 
ಇದೀಗ ವಿರಾಟ್ ಕೊಹ್ಲಿ ಸೌರವ್ ಗಂಗೂಲಿ ಅವರ ಈ ಸಾಧನೆ ಮೇಲೆ ಕಣ್ಣೀಟ್ಟಿದ್ದು ಶ್ರೀಲಂಕಾ ತಂಡವನ್ನು ಕ್ಲೀನ್ ಸ್ವೀಪ್ ಮಾಡಿದರೆ 22 ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಎರಡನೇ ಸ್ಥಾನಕ್ಕೇರಲಿದ್ದಾರೆ. ಕೊಹ್ಲಿಯ ಮತ್ತೊಂದು ವಿಶೇಷವೆಂದರೇ ಅವರ ನಾಯಕತ್ವದಲ್ಲಿ ತಂಡ ಕೇವಲ 3 ಪಂದ್ಯಗಳಲ್ಲಿ ಮಾತ್ರ ಸೋಲು ಕಂಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT