ಲಕ್ಮಲ್ ದಾಳಿಗೆ ತತ್ತರಿಸಿದ ಭಾರತ 
ಕ್ರಿಕೆಟ್

ಮೊದಲ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ 172 ರನ್ ಗೆ ಭಾರತ ಆಲ್ ಔಟ್

ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ಶ್ರೀಲಂಕಾ ವಿರುದ್ಧ ಕೇವಲ 172 ರನ್ ಗಳಿಗೆ ಆಲ್ ಔಟ್ ಆಗಿದೆ.

ಕೋಲ್ಕತಾ: ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ಶ್ರೀಲಂಕಾ ವಿರುದ್ಧ ಕೇವಲ 172 ರನ್ ಗಳಿಗೆ ಆಲ್ ಔಟ್ ಆಗಿದೆ.
ಟೆಸ್ಟ್ ಪಂದ್ಯ ಆರಂಭವಾದ ದಿನದಿಂದಲೂ ಮಳೆ ಕಾಟಕ್ಕೆ ತುತ್ತಾಗಿದ್ದ ಪಂದ್ಯದಲ್ಲಿ ಲಂಕಾದ ಬೌಲರ್ ಲಕ್ಮಲ್ ಉತ್ತಮ ಸ್ಪೆಲ್ ಮೂಲಕ ಭಾರತೀಯ ಬ್ಯಾಟ್ಸಮನ್ ಗಳನ್ನು ಕಾಡಿದರು, 19 ಓವರ್ ಗಳನ್ನು ಎಸೆದ ಲಕ್ಮಲ್ 12  ಮೇಡನ್ ಗಳೊಂದಿಗೆ ಪ್ರಮುಖ 4 ವಿಕೆಟ್ ಗಳನ್ನು ಪಡೆದು ಭಾರತದ ಕುಸಿತಕ್ಕೆ ಕಾರಣವಾದರು. ಭಾರತದ ಪರ ಚೇತೇಶ್ವರ ಪೂಜಾರ 52 ರನ್ ಗಳನ್ನು ಗಳಿಸಿದ್ದು ಬಿಟ್ಟರೆ ಲಂಕಾದ ಬೌಲಿಂಗ್ ದಾಳಿಗೆ ಮತ್ತಾವ ಆಟಗಾರರೂ ದಿಟ್ಟ  ಉತ್ತರ ನೀಡಲು ಸಾಧ್ಯವಾಗಲಿಲ್ಲ.
ತಂಡದ ನಾಯಕ ವಿರಾಟ್ ಕೊಹ್ಲಿ ಸಹಿತ ಇಬ್ಬರು ಪ್ರಮುಖ ಬ್ಯಾಟ್ಸಮನ್ ಗಳು ಡಕ್ ಔಟ್ ಆಗಿದ್ದು ಭಾರತಕ್ಕೆ ಭಾರಿ ಹಿನ್ನಡೆಯುಂಟು ಮಾಡಿತು. ಇದಲ್ಲದೆ 4 ಮಂದಿ ಆಟಗಾರರು ಎರಡಂಕಿ ಕೂಡ ದಾಟುವಲ್ಲಿ ವಿಫಲರಾದರು.  ಅಂತಿಮವಾಗಿ ಭಾರತ ಕೇವಲ 172 ರನ್ ಗಳಿಸಿ ಆಲ್ ಔಟ್ ಆಯಿತು.
ಲಂಕಾ ಪರ ಲಕ್ಮಲ್ 4 ವಿಕೆಟ್ ಗಳಿಸಿ ಯಶಸ್ವಿ ಬೌಲರ್ ಎನಿಸಿಕೊಂಡರೆ, ಲಾಹಿರು ಗಮಾಗೆ, ಶಣಕ ಮತ್ತು ಪೆರೆರಾ ತಲಾ 2 ವಿಕೆಟ್ ಕಬಳಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ