ಕೋಲ್ಕತಾ: ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ನ ಎರಡನೇ ಇನ್ನಿಂಗ್ಸ್ನ ನಾಲ್ಕನೇ ದಿನದಾಟದಂತ್ಯಕ್ಕೆ ಭಾರತ 1 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿದ್ದು 49 ರನ್ ಗಳ ಮುನ್ನಡೆ ಸಾಧಿಸಿದೆ.
ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 172 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಪ್ರಾರಂಭಿಸಿದ ಶ್ರೀಲಂಕಾ ತಂಡ 294 ರನ್ ಗಳಿಗೆ ಆಲ್ ಔಟ್ ಆಗಿತ್ತು. ಇದರೊಂದಿಗೆ ಭಾರತದ ವಿರುದ್ಧ 122 ರನ್ ಗಳ ಪ್ರಥಮ ಇನ್ನಿಂಗ್ಸ್ ಮುನ್ನಡೆ ಸಾಧಿಸಿತು.
ಎರಡನೇ ಇನ್ನಿಂಗ್ಸ್ ಆರಂಭಿಸಿದ ಶಿಖರ್ ಧವನ್ ಮತ್ತು ಕೆಎಲ್ ರಾಹುಲ್ ಉತ್ತಮ ಬುನಾದಿ ಹಾಕಿಕೊಟ್ಟರು. ಈ ಇಬ್ಬರ ಜತೆಯಾಟದಲ್ಲಿ 166 ರನ್ ಅರಿದು ಬಂದಿತು. 94 ರನ್ ಗಳಿಸಿದ್ದ ಶಿಖರ್ ಧವನ್ ಶತಕದ ಅಂಚಿನಲ್ಲಿ ಯಡವಿದರು. ಶನಕ ಎಸೆತದಲ್ಲಿ ಕೀಪರ್ ಡಿಕ್ವೆಲ್ಲಾಗೆ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದರು.
ಸದ್ಯ ಕ್ರೀಸ್ ನಲ್ಲಿ 73 ರನ್ ಗಳಿಸಿರುವ ಕೆಎಲ್ ರಾಹುಲ್ ಹಾಗೂ 2 ರನ್ ಗಳಿಸಿ ಚೇತೇಶ್ವರ ಪೂಜಾರ ಐದನೇ ದಿನದಾಟವನ್ನು ಪ್ರಾರಂಭಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics