ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ನಾಗ್ಪುರ ಟೆಸ್ಟ್: 205 ರನ್‍ಗಳಿಗೆ ಲಂಕಾ ಆಲೌಟ್, ಭಾರತ 11/1

ಪ್ರವಾಸಿ ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಲಂಕಾ ತಂಡವನ್ನು ಕೇವಲ 205 ರನ್ ಗಳಿಗೆ ಟೀಂ ಇಂಡಿಯಾ ಆಲೌಟ್ ಮಾಡಿದೆ...

ಟೀಂ ಇಂಡಿಯಾ
Vishwanath S
Updated On : 24 Nov 2017, 6:25 am
ನಾಗ್ಪುರ: ಪ್ರವಾಸಿ ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 1 ವಿಕೆಟ್ ನಷ್ಟಕ್ಕೆ 11 ರನ್ ಗಳಿಸಿದೆ. 
ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಲಂಕಾ ಪಡೆ ಟೀಂ ಇಂಡಿಯಾ ಬೌಲರ್ ಗಳ ಮಾರಕ ದಾಳಿಗೆ ತತ್ತರಿಸಿದ್ದು 205 ರನ್ ಗಳಿಗೆ ಆಲೌಟ್ ಆಯಿತು. ನಂತರ ಇನ್ನಿಂಗ್ಸ್ ಆರಂಭಿಸಿದ ಭಾರತ ಮೊದಲ ದಿನದಾಟದಂತ್ಯಕ್ಕೆ 1 ವಿಕೆಟ್ ನಷ್ಟಕ್ಕೆ 11 ರನ್ ಪೇರಿಸಿದೆ. 
ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ಕೆಎಲ್ ರಾಹುಲ್ 7 ರನ್ ಗಳಿಸಿ ಔಟಾದರು. ಮುರಳಿ ವಿಜಯ್ ಅಜೇಯ 2 ಮತ್ತು ಚೇತೇಶ್ವರ ಪೂಜಾರ ಅಜೇಯ 2 ರನ್ ಗಳಿಸಿ ಎರಡನೇ ದಿನದಾಟವನ್ನು ಆರಂಭಿಸಲಿದ್ದಾರೆ. 

Advertisement

Advertisement

ಲಂಕಾ ಪರ ಕರುಣರತ್ನೆ 51, ಚಾಂಡಿಮಲ್ 57, ಡಿಕ್ಲೆಲ್ಲಾ 24 ಹಾಗೂ ಪೆರೆರಾ 15 ರನ್ ಗಳಿಸಿ ಔಟಾಗಿದ್ದಾರೆ. 
ಭಾರತ ಪರ ಆರ್ ಅಶ್ವಿನ್ 4, ಇಶಾಂತ್ ಶರ್ಮಾ ಮತ್ತು ರವೀಂದ್ರ ಜಡೇಜಾ ತಲಾ 3 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement