ಟೀಂ ಇಂಡಿಯಾ 
ಕ್ರಿಕೆಟ್

ನಾಗ್ಪುರ ಟೆಸ್ಟ್: ಶ್ರೀಲಂಕಾ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ ಮತ್ತು 239 ರನ್‌ಗಳ ಭರ್ಜರಿ ಜಯ

ಪ್ರವಾಸಿ ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀ ಇಂಡಿಯಾ ಇನ್ನಿಂಗ್ಸ್ ಹಾಗೂ 239 ರನ್‌ಗಳಿಂದ ಭರ್ಜರಿ ಜಯ ಗಳಿಸಿದೆ...

ನಾಗ್ಪುರ: ಪ್ರವಾಸಿ ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀ ಇಂಡಿಯಾ ಇನ್ನಿಂಗ್ಸ್ ಹಾಗೂ 239 ರನ್‌ಗಳಿಂದ ಭರ್ಜರಿ ಜಯ ಗಳಿಸಿದೆ. 
ನಾಗ್ಪುರದ ವಿದರ್ಭ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ ಲಂಕಾ ತಂಡವನ್ನು 166 ರನ್‌ಗಳಿಗೆ ಆಲೌಟ್ ಮಾಡಿತ್ತು.  
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ಲಂಕಾ ತಂಡ ಮೊದಲ ಇನ್ನಿಂಗ್ಸ್ ನಲ್ಲಿ 205 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಮೊದಲ ಇನ್ನಿಂಗ್ಸ್ ಪ್ರಾರಂಭಿಸಿದ್ದ ಭಾರತ 610 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡು 405 ರನ್ ಮುನ್ನಡೆ ಸಾಧಿಸಿತ್ತು. ನಂತರ ಎರಡನೇ ಇನ್ನಿಂಗ್ಸ್ ಪ್ರಾರಂಭಿಸಿದ ಶ್ರೀಲಂಕಾಗೆ ಆರಂಭಿಕ ಆಘಾತ ಎದುರಾಗಿದ್ದು ಎರಡನೇ ಎಸತದಲ್ಲೇ ಸಮರವಿಕ್ರಮಾ ಡಕ್ ಔಟ್ ಆಗಿ ಪೆವಿಲಿಯನ್ ಸೇರಿದರು. ನಾಲ್ಕನೇ ದಿನದಾಟವನ್ನು ಪ್ರಾರಂಭಿಸಿದ ಕರುಣರತ್ನೆ 18 ಹಾಗೂ ತಿರಿಮನ್ನೆ 23 ರನ್ ಗಳಿಸಿ ಔಟಾದರು. 
ನಂತರ ಭಾರತೀಯ ಬೌಲರ್ ಗಳ ಮಾರಕ ದಾಳಿಗೆ ಲಂಕಾ ಆಟಗಾರರು ತರಗೆಲೆಯಂತೆ ಉದುರಿದರು. ಚಾಂಡಿಮಲ್ 61 ಬಿಟ್ಟರೆ ಮತ್ಯಾರಾ ರನ್ ಕಲೆ ಹಾಕುವಲ್ಲಿ ವಿಫಲರಾದರು. 
ಭಾರತ ಪರ ಮೊದಲ ಇನ್ನಿಂಗ್ಸ್ ನಲ್ಲಿ ಕೆಎಲ್ ರಾಹುಲ್ 7, ಮುರಳಿ ವಿಜಯ್ 128, ಚೇತೇಶ್ವರ ಪೂಜಾರ 143, ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ 213 ಹಾಗೂ ರೋಹಿತ್ ಶರ್ಮಾ ಅಜೇಯ 102 ರನ್ ಗಳಿಸಿದ್ದಾರೆ. ಲಂಕಾ ಪರ ಬೌಲಿಂಗ್ ನಲ್ಲಿ ಪೆರೆರಾ 3, ಘಮಗೆ, ಹೆರಾತ್, ಶನಕ ತಲಾ 1 ವಿಕೆಟ್ ಪಡೆದಿದ್ದಾರೆ. 
ಲಂಕಾ ಪರ ಲಂಕಾ ಪರ ಮೊದಲ ಇನ್ನಿಂಗ್ಸ್ ನಲ್ಲಿ ಕರುಣರತ್ನೆ 51, ಚಾಂಡಿಮಲ್ 57, ಡಿಕ್ಲೆಲ್ಲಾ 24 ಹಾಗೂ ಪೆರೆರಾ 15 ರನ್ ಗಳಿಸಿ ಔಟಾಗಿದ್ದಾರೆ. ಭಾರತ ಪರ ಆರ್ ಅಶ್ವಿನ್ 4, ಇಶಾಂತ್ ಶರ್ಮಾ ಮತ್ತು ರವೀಂದ್ರ ಜಡೇಜಾ ತಲಾ 3 ವಿಕೆಟ್ ಪಡೆದಿದ್ದಾರೆ. 
ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಕೊಲ್ಕತ್ತಾದಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ