ಶ್ರೀನಗರ: ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಗೌರವ ಹುದ್ದೆ ಹೊಂದಿರುವ ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇತ್ತೀಚೆಗೆ ಜಮ್ಮು ಕಾಶ್ಮೀರಕ್ಕೆ ತೆರಳಿದ್ದು ಈ ಸಂದರ್ಭದಲ್ಲಿ ಸ್ಥಳೀಯರು ಬೂಮ್ ಬೂಮ್ ಆಫ್ರಿದಿ, ಪಾಕ್ ಪರ ಘೋಷಣೆಗಳನ್ನು ಕೂಗಿದ್ದಾರೆ.
ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ ಸೌಹಾರ್ದ ಕ್ರಿಕೆಟ್ ಪಂದ್ಯವನ್ನು ಆಯೋಜಿಸಿತ್ತು. ಈ ಪಂದ್ಯಕ್ಕೆ ಮುಖ್ಯ ಅತಿಥಿಯಾಗಿ ಬಂದಿದ್ದರು. ಈ ವೇಳೆ ಕೆಲ ಪ್ರೇಕ್ಷಕರು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಆಫ್ರಿದಿ ಮತ್ತು ಪಾಕಿಸ್ತಾನದ ಪರ ಜೋರಾಗಿ ಘೋಷಣೆ ಕೂಗಿದ್ದಾರೆ ಎಂದು ವರದಿಯಾಗಿದೆ.
ಎಂಎಸ್ ಧೋನಿ ಆಗಮನದ ವೇಳೆ ಪ್ರೇಕ್ಷಕರು ಪಾಕ್ ಪರ ಘೋಷಣೆಗಳನ್ನು ಕೂಗುತ್ತಿದ್ದು ಭಾರತೀಯ ಸೇನೆ ಯೋಧರು ಅವರನ್ನು ದೂರ ತಳ್ಳುತ್ತಿರುವ ದೃಶ್ಯ ವಿಡಿಯೋದಲ್ಲಿ ಕಾಣುತ್ತದೆ.
ಈ ಘಟನೆ ಧೋನಿ ಸೇರಿ ಸೇನೆಗೆ ಇರಿಸುಮುರಿಸನ್ನುಂಟು ಮಾಡಿದೆ.
ಜಮ್ಮು ಮತ್ತು ಕಾಶ್ಮೀರದ ಯುವ ಜನತೆಯನ್ನು ಉಗ್ರವಾದಿ ಚಟುವಟಿಕೆಯಿಂದ ದೂರವಿರಿಸಲು ಬೇಕಾದ ಅಗತ್ಯ ಕ್ರಮಗಳನ್ನು ಭಾರತೀಯ ಸೇನೆ ತೆಗೆದುಕೊಳ್ಳುತ್ತಿದೆ. ಉಗ್ರಗಾಮಿಗಳ ಮನವೊಲಿಸಿ ಮುಖ್ಯವಾಹಿನಿಗೆ ತರಲು ಯತ್ನಿಸುತ್ತಿದೆ. ಧೋನಿಯನ್ನು ಕರೆಸಿರುವುದೂ ಈ ಕಾರಣಕ್ಕೆ. ಧೋನಿ ಕಾರ್ಯಕ್ರಮದಲ್ಲಿ ಯುವ ಕ್ರಿಕೆಟಿಗರೊಂದಿಗೆ ಮಾತುಕತೆ ನಡೆಸಿ ಅಭಿಮಾನಿಗಳ ಗಮನ ಸೆಳೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics