ಅಜಿಂಕ್ಯ ರಹಾನೆ 
ಕ್ರಿಕೆಟ್

ಆಸೀಸ್ ವಿರುದ್ಧ ಸತತ 4 ಅರ್ಧಶತಕ ಸಿಡಿಸಿದರು, ರಹಾನೆಗೆ ಟಿ20 ತಂಡದಲ್ಲಿ ಸ್ಥಾನವಿಲ್ಲ!

ಟೀಂ ಇಂಡಿಯಾದ ಆರಂಭಿಕ ಆಟಗಾರ ಅಜಿಂಕ್ಯ ರಹಾನೆ ಅವರು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಸತತ ನಾಲ್ಕು ಅರ್ಧ ಶತಕ ಸಿಡಿಸಿದರೂ ಆಸೀಸ್ ವಿರುದ್ಧದ ಟಿ20 ಸರಣಿಗೆ ಆಯ್ಕೆ...

ಮುಂಬೈ: ಟೀಂ ಇಂಡಿಯಾದ ಆರಂಭಿಕ ಆಟಗಾರ ಅಜಿಂಕ್ಯ ರಹಾನೆ ಅವರು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಸತತ ನಾಲ್ಕು ಅರ್ಧ ಶತಕ ಸಿಡಿಸಿದರೂ ಆಸೀಸ್ ವಿರುದ್ಧದ ಟಿ20 ಸರಣಿಗೆ ಆಯ್ಕೆ ಮಾಡದಿರುವುದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಅಪ್ರಬುದ್ಧತೆಯನ್ನು ಎತ್ತಿ ತೋರಿಸುತ್ತಿದೆ. 
ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಅವರು ತಂಡದಿಂದ ಹೊರಗುಳಿದಿದ್ದರಿಂದ ಆಸ್ಟ್ರೇಲಿಯಾ ವಿರುದ್ಧದ ಐದು ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ಅಜಿಂಕ್ಯ ರಹಾನೆ 5, 55, 70, 53, 61 ರನ್ ಸಿಡಿಸಿದ್ದರು. ಇನ್ನು ಈ ಹಿಂದೆ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ರಹಾನೆ ಸರಣಿ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾಗಿದ್ದರು. ಉತ್ತಮ ಪ್ರದರ್ಶನದ ನಡುವೆಯೂ ಟಿ20 ತಂಡದಲ್ಲಿ ಸ್ಥಾನ ವಂಚಿತರಾಗಿದ್ದಾರೆ. 
29 ವರ್ಷದ ಮುಂಬೈ ಬ್ಯಾಟ್ಸ್ ಮನ್ ಅಜಿಂಕ್ಯ ರಹಾನೆ ಈ ಬಗ್ಗೆ ಪ್ರತಿಕ್ರಿಯಿಸಿದ್ದು ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಟೀಂ ಇಂಡಿಯಾ ತಂಡದಲ್ಲಿ ಸ್ಥಾನಪಡೆದಿರುವುದಕ್ಕೆ ಯಾವುದೇ ಬೇಸರವಿಲ್ಲ. ಆಯ್ಕೆಗಾರರ ನಿರ್ಧಾರವನ್ನು ನಾನು ಗೌರವಿಸುತ್ತೇನೆ. ತಂಡದ ಪರವಾಗಿ ನಾನು ಸಾಕಷ್ಟು ಪಂದ್ಯಗಳನ್ನು ಆಡಿದ್ದೇನೆ. ಇನ್ನು ಆಟಗಾರರ ನಡುವೆ ಸ್ಪರ್ಧೆ ಇದ್ದರೇ ಮಾತ್ರ ಅತ್ಯುತ್ತಮ ಕಾರ್ಯಕ್ಷಮತೆಯನ್ನು ನೀಡುವುದಕ್ಕೆ ಸಹಾಯವಾಗುತ್ತದೆ ಎಂದರು. 
ಆಸ್ಟ್ರೇಲಿಯಾ ವಿರುದ್ಧದ ಐದನೇ ಏಕದಿನ ಪಂದ್ಯದಲ್ಲಿ ಅಜಿಂಕ್ಯ ರಹಾನೆ ರೋಹಿತ್ ಶರ್ಮಾ ಜತೆಗೂಡಿ 124 ರನ್ ಗಳ ಜತೆಯಾಟ ನೀಡಿದ್ದರು. ಈ ಪಂದ್ಯದಲ್ಲಿ ರಹಾನೆ 61 ರನ್ ಸಿಡಿಸಿದ ಪಂದ್ಯ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!