ಕ್ರಿಕೆಟ್

ಆಸೀಸ್ ವಿರುದ್ಧದ ಟಿ20 ಸರಣಿ ಕ್ಲೀನ್ ಸ್ವೀಪ್ ಮಾಡಿದ್ರೆ ಐಸಿಸಿ ಟಿ20 ಯಲ್ಲಿ ಭಾರತಕ್ಕೆ 2ನೇ ಸ್ಥಾನ!

Vishwanath S
ರಾಂಚಿ: ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಟೆಸ್ಟ್ ಮತ್ತು ಏಕದಿನ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನದಲ್ಲಿರುವ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ಕ್ಲೀನ್ ಸ್ವೀಪ್ ಮಾಡಿದರೆ 2ನೇ ಸ್ಥಾನಕ್ಕೆ ಬಡ್ತಿ ಪಡೆಯಲಿದೆ. 
ಟೆಸ್ಟ್ ಹಾಗೂ ಏಕದಿನ ರ್ಯಾಂಕಿಂಗ್ ನಲ್ಲಿ ಅಗ್ರಸ್ಥಾನದಲ್ಲಿರುವ ಭಾರತ ಟಿ20ಯಲ್ಲಿ ಮಾತ್ರ 5ನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿ ಆಡಲಿದ್ದು ಮೂರು ಪಂದ್ಯಗಳಲ್ಲಿ ಭಾರತ ಗೆದ್ದರೇ 3 ಸ್ಥಾನ ಬಡ್ತಿಯೊಂದಿಗೆ 2ನೇ ಸ್ಥಾನಕ್ಕೇರುವ ಅವಕಾಶವಿದೆ. 
ಸದ್ಯ ಟೀಂ ಇಂಡಿಯಾ 116 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಟಿ20 ಮೂರು ಪಂದ್ಯಗಳನ್ನು ಗೆದ್ದರೇ 122 ಅಂಕಗಳೊಂದಿಗೆ 2ನೇ ಸ್ಥಾನಕ್ಕೆ ಬಡ್ತಿ ಪಡೆಯುತ್ತದೆ. ನಂತರ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲೂ ಭಾರತ ಗೆದ್ದರೆ ಅಗ್ರಸ್ಥಾನಕ್ಕೇರುತ್ತದೆ. 
ಸದ್ಯ ನ್ಯೂಜಿಲೆಂಡ್ 125 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಪಾಕಿಸ್ತಾನ(121), ವೆಸ್ಟ್ ಇಂಡೀಸ್(120), ಇಂಗ್ಲೆಂಡ್(119) ನಂತರ ಸ್ಥಾನದಲ್ಲಿದೆ. 
SCROLL FOR NEXT