ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಮೊದಲ ಟಿ20 ಪಂದ್ಯ: ಆಸ್ಟ್ರ‍ೇಲಿಯಾ ವಿರುದ್ಧ ಭಾರತಕ್ಕೆ 9 ವಿಕೆಟ್ ಗಳ ಜಯ

ರಾಂಚಿಯಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಗೆಲುವು ಸಾಧಿಸಿದೆ.

ವಿರಾಟ್ ಕೊಹ್ಲಿ
Srinivas Rao BV
Updated On : 7 Oct 2017, 10:53 am
ರಾಂಚಿ: ರಾಂಚಿಯಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ನಡುವಿನ ಮೊದಲನೇ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಗೆಲುವು ಸಾಧಿಸಿದೆ. 
ಟಾಸ್ ಗೆದ್ದ ಕೋಹ್ಲಿ ಪಡೆ ಬೌಲಿಂಗ್ ನ್ನು ಆಯ್ಕೆ ಮಾಡಿಕೊಂಡಿತು. 18.4 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 118 ರನ್ ಗಳಿಸಿದ್ದ ಆಸ್ಟ್ರೇಲಿಯಾ ತಂಡಕ್ಕೆ ಮಳೆ ಅಡ್ಡಿಯಾಯಿತು. ಆಸ್ಟ್ರೇಲಿಯಾ ತಂಡ 20 ಓವರ್ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ. ಮಳೆ ಮುಂದುವರೆದ ಪರಿಣಾಮ ಭಾರತ ತಂಡದ ಬ್ಯಾಟಿಂಗ್ ಗೂ ಅಡ್ಡಿಯಾಯಿತು. ಡಕ್ವರ್ತ್ ಲೂಯಿಸ್ ನಿಯಮದ ಅನ್ವಯ ಭಾರತಕ್ಕೆ 6 ಓವರ್ ಗಳಲ್ಲಿ 48 ರನ್ ಟಾರ್ಗೆಟ್ ನೀಡಲಾಯಿತು. 
ಸುಲಭವಾದ ಟಾರ್ಗೆಟ್ ನ್ನು ಬೆನ್ನಟ್ಟಿದ ಭಾರತ ಆಸ್ಟ್ರೇಲಿಯಾ ವಿರುದ್ಧ 9 ವಿಕೆಟ್ ಗಳ ಜಯ ದಾಖಲಿಸಿದೆ.  

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments