ನವದೆಹಲಿ: ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಶನಿವಾರ ಭಾರತ ತಂಡವನ್ನು ಪ್ರಕಟಿಸಿದ್ದು, ಎಡಗೈ ಓಪನರ್ ಶಿಖರ್ ಧವನ್ ತಂಡಕ್ಕೆ ಮರಳಿದ್ದು, ಇವರಿಗೆ ಕನ್ನಡಿಗ ಕೆಎಲ್ ರಾಹುಲ್ ಸ್ಥಾನ ಬಿಟ್ಟುಕೊಟ್ಟಿದ್ದಾರೆ.
ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ಮತ್ತು ವೇಗಿ ಶಾರ್ದುಲ್ ಠಾಕೂರ್ ಅವರಿಗೂ ಬುಲಾವ್ ನೀಡಲಾಗಿದೆ. ಅದೇ ಹೊತ್ತಿಗೆ ಅನುಭವಿ ಸ್ಪಿನ್ನರ್‌ಗಳಾದ ರವಿಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಅವರನ್ನು ಆಯ್ಕೆಗೆ ಪರಿಗಣಿಸಿಲಾಗಿಲ್ಲ.
ಅಕ್ಟೋಬರ್ 22ರಿಂದ ಅ,29ರವರೆಗೆ ನ್ಯೂಜಿಲೆಂಡ್ ಹಾಗೂ ಭಾರತ ನಡುವೆ ಮೂರು ಏಕದಿನ ಪಂದ್ಯಗಳು ನಡೆಯಲಿದ್ದು, ಅಕ್ಟೋಬರ್ 22ರಂದು ಮೊದಲ ಏಕದಿನ ಪಂದ್ಯ ಮುಂಬೈನಲ್ಲಿ ನಡೆಯಲಿದೆ. ಅಕ್ಟೋಬರ್ 25 ಪುಣೆ, 29ರಂದು ಕಾನ್ಪುರದಲ್ಲಿ ಉಳಿದೆರೆಡು ಏಕದಿನ ಪಂದ್ಯಗಳು ನಡೆಯಲಿವೆ. ನಂತರ ಮೂರು ಟಿ20 ಪಂದ್ಯಗಳ ಸರಣಿ ನಡೆಯಲಿದೆ.
ಮಹೇಂದ್ರ ಸಿಂಗ್ ಧೋನಿ (ವಿಕೆಟ್ ಕೀಪರ್)