ಟೀಂ ಇಂಡಿಯಾ 
ಕ್ರಿಕೆಟ್

ಭವಿಷ್ಯದಲ್ಲಿ 4 ದಿನದ ಟೆಸ್ಟ್‌ ಪಂದ್ಯಗಳನ್ನು ಟೀಂ ಇಂಡಿಯಾ ಆಡುವುದು ಅಸಂಭವ!

ಟೆಸ್ಟ್ ಕ್ರಿಕೆಟ್ ನಲ್ಲಿ ಮಹತ್ವದ ಬದಲಾವಣೆಯನ್ನು ತರಲು ಮುಂದಾಗಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಐದು ದಿನಗಳ ಟೆಸ್ಟ್ ಕ್ರಿಕೆಟ್ ಬದಲಿಕೆ ನಾಲ್ಕು...

ನವದೆಹಲಿ: ಟೆಸ್ಟ್ ಕ್ರಿಕೆಟ್ ನಲ್ಲಿ ಮಹತ್ವದ ಬದಲಾವಣೆಯನ್ನು ತರಲು ಮುಂದಾಗಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಐದು ದಿನಗಳ ಟೆಸ್ಟ್ ಕ್ರಿಕೆಟ್ ಬದಲಿಕೆ ನಾಲ್ಕು ದಿನಗಳ ಪಂದ್ಯಗಳನ್ನು ನಡೆಸಲು ತೀರ್ಮಾನಿಸಿದೆ. 
ಅಂತೆ ಪ್ರಯೋಗಿಕವಾಗಿ ಪಂದ್ಯಗಳನ್ನು ನಡೆಸಲು ಐಸಿಸಿ ತೀರ್ಮಾನಿಸಿದ್ದು ಇದಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ನಿಂದ ವ್ಯತಿರಿಕ್ತ ಪ್ರತಿಕ್ರಿಯೆ ಬಂದಿದೆ. ಭವಿಷ್ಯದಲ್ಲಿ ಟೀಂ ಇಂಡಿಯಾ ನಾಲ್ಕು ದಿನಗಳ ಟೆಸ್ಟ್ ಕ್ರಿಕೆಟ್ ಅನ್ನು ಆಡುವುದು ಅಸಂಭವವಾಗಿದೆ. 
ಪ್ರಾಯೋಗಿಕವಾಗಿ ನಡೆಯಲಿರುವ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮತ್ತು ಜಿಂಬಾಬ್ವೆ ನಡುವೆ ಪಂದ್ಯ ನಡೆಸಲಿದೆ. ಇತರ ಮಂಡಳಿಗೂ ನಾಲ್ಕು ದಿನದ ಟೆಸ್ಟ್ ಪಂದ್ಯಕ್ಕೆ ಹೊಂದಿಕೊಳ್ಳಲು ಮುಂದಾಗುತ್ತಿವೆ. ಆದರೆ ಐಸಿಸಿ ಕ್ರಿಕೆಟ್ ಕಮಿಟಿಯ ಮುಖ್ಯಸ್ಥ ಅನಿಲ್ ಕುಂಬ್ಳೆ ಅವರ ನಾಲ್ಕು ದಿನಗಳ ಟೆಸ್ಟ್ ಕ್ರಿಕೆಟ್ ಶಿಫಾರಸ್ಸಿಗೆ ಸೆಡ್ಡು ಹೊಡೆಯಲು ಮುಂದಾಗಿರುವ ಬಿಸಿಸಿಐ ಮಾತ್ರ ಹಳೆಯ ಐದು ದಿನಗಳ ಸಂಪ್ರದಾಯಕ್ಕೆ ಹೊಂದಿಕೊಳ್ಳಲಿದೆ. 
ಭವಿಷ್ಯದಲ್ಲಿ ಭಾರತ ನಾಲ್ಕು ದಿನಗಳ ಟೆಸ್ಟ್ ಪಂದ್ಯವನ್ನು ಆಡುವುದಿಲ್ಲ. ಭಾರತ ಆಡುವುದಾದರೇ ಐದು ದಿನಗಳ ಟೆಸ್ಟ್ ಪಂದ್ಯಗಳಲ್ಲಿ ಮಾತ್ರ ಎಂದು ಬಿಸಿಸಿಐನ ಉನ್ನತ ಮೂಲಗಳು ಸುದ್ದಿ ಸಂಸ್ಧೆಯೊಂದಕ್ಕೆ ತಿಳಿಸಿವೆ. 
ನಾಲ್ಕು ದಿನಗಳ ಟೆಸ್ಟ್ ಪಂದ್ಯ ಟೀಂ ಇಂಡಿಯಾ ಆಡದಿರಲು ಮತ್ತೊಂದು ಕಾರಣ ಎಂದರೇ ಪ್ರಸ್ತಾವಿತ ಟೆಸ್ಟ್ ಲೀಗ್ ಗಳಿಗೆ ಯಾವುದೇ ಅಂಕಗಳನ್ನು ನೀಡಲಾಗಿಲ್ಲವಾದ್ದರಿಂದ ಬಿಸಿಸಿಐ ನಾಲ್ಕು ದಿನದ ಟೆಸ್ಟ್ ಆಡಲು ಮುಂದಾಗುತ್ತಿಲ್ಲ. ವಿಶ್ವ ಟೆಸ್ಟ್ ಕ್ರಿಕೆಟ್ ನಲ್ಲಿ ಐದು ದಿನಗಳ ಟೆಸ್ಟ್ ಪಂದ್ಯಕ್ಕೆ ಮಾತ್ರ ಅಂಕಗಳನ್ನು ನೀಡಲಾಗುತ್ತದೆ. ಹೀಗಾಗಿ ಅಗಣ್ಯವಾಗಿರದ ಟೆಸ್ಟ್ ಪಂದ್ಯಗಳನ್ನು ಆಡುವುದಿಲ್ಲ. ಮುಂದಿನ ದಿನಗಳಲ್ಲಿ ಭಾರತ ಐರ್ಲೆಂಡ್ ಮತ್ತು ಆಫ್ಗಾನಿಸ್ತಾನದ ವಿರುದ್ಧ ಸಹ ಟೆಸ್ಟ್ ಪಂದ್ಯಗಳನ್ನು ಆಡಲಿದ್ದು ಆ ಪಂದ್ಯಗಳು ಸಹ ಐದು ದಿನದ ಟೆಸ್ಟ್ ಕ್ರಿಕೆಟ್ ಆಗಿರಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

'ಭಾರತೀಯನ ಮದುವೆಯಾದಾಕ್ಷಣ Indian ಆಗಲ್ಲ, ಬಾಂಗ್ಲಾದೇಶಿ ಪತ್ನಿಗೆ ಭಾರತ ಪ್ರವೇಶ ನಿರಾಕರಣೆ ಸರಿ ಇದೆ': ಹೈಕೋರ್ಟ್

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!