ರಣಜಿ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಇ೯ನ್ನಿಂಗ್ಸ್ ಮತ್ತು 121 ರನ್ ಗಳ ಭರ್ಜರಿ ಜಯ 
ಕ್ರಿಕೆಟ್

ರಣಜಿ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಇನ್ನಿಂಗ್ಸ್ ಮತ್ತು 121 ರನ್ ಗಳ ಭರ್ಜರಿ ಜಯ

ಮೈಸೂರಿನ ಮಾನಸ ಗಂಗೋತ್ರಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಯಲ್ಲಿ ಅಸ್ಸಾಂ ವಿರುದ್ಧ ಕರ್ನಾಟಕ ತಂಡ ಇನ್ನಿಂಗ್ಸ್ ಜಯ ಸಾಧಿಸಿದೆ.

ಮೈಸೂರು: ಮೈಸೂರಿನ  ಮಾನಸ ಗಂಗೋತ್ರಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಯಲ್ಲಿ ಅಸ್ಸಾಂ ವಿರುದ್ಧ ಕರ್ನಾಟಕ ತಂಡ ಇನ್ನಿಂಗ್ಸ್ ಜಯ ಸಾಧಿಸಿದೆ. ಇದರೊಡನೆ 84ನೇ  ಆವೃತ್ತಿಯ ರಣಜಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಜ್ಯ ಗೆಲುವಿನ ಶುಭಾರಂಭ ಮಾಡಿದೆ.
ಆಲ್‌ರೌಂಡ್‌ ಆಟ ಆಡಿದ ವಿನಯ್ ಕುಮಾರ್ ನಾಯಕತ್ವದ ಕರ್ನಾಟಕ ತಂಡ ಅಸ್ಸಾಂ ವಿರುದ್ಧ ಇನ್ನಿಂಗ್ಸ್ ಮತ್ತು 121 ರನ್ ಗಳ ಗೆಲುವು ದಾಖಲಿಸಿತು.
ಮೊದಲ ಬ್ಯಾಟ್ ಮಾಡಿದ ಅಸ್ಸಾಂ ಮೊದಲ ಇನ್ನಿಂಗ್ಸ್ ನಲ್ಲಿ 145 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು. ಇದಾದ ಬಳಿಕ ಬ್ಯಾಟಿಂಗ್ ಆರಂಭಿಸಿದ ಕರ್ನಾಟಕ ಸಮರ್ಥ್ 123, ಗೌತಮ್ ಕೆ 149 ರನ್ ಗಳ ನೆರವಿನೊಡನೆ  ಮೊದಲ ಇನ್ನಿಂಗ್ಸ್ ನಲ್ಲಿ 7 ವಿಕೆಟ್ ಗೆ 469 ರನ್ ಗಳಿಸಿತು.
ಬಳಿಕ 2ನೇ ಇನ್ನಿಂಗ್ಸ್ ಆರಂಭಿಸಿದ ಅಸ್ಸಾಂ ಕೇವಲ 203 ರನ್ ಗಳಿಗೆ ಸರ್ವಪತನ ಕಂಡಿತು. ಇದರೊಡನೆ ಇನ್ನಿಂಗ್ಸ್ ನೊಂದಿಗೆ 121 ರನ್ ಗಳ ಭರ್ಜರಿ ಜಯ ಕರ್ನಾಟಕದ ಪಾಲಿಗೆ ಒದಗಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು