ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

200ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಮೋಘ ಶತಕ, ಪಾಂಟಿಂಗ್ ದಾಖಲೆ ಉಡೀಸ್

ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಮೋಘ ಶತಕ ಸಿಡಿಸಿದ್ದಾರೆ...

ವಿರಾಟ್ ಕೊಹ್ಲಿ
Vishwanath S
Updated On : 22 Oct 2017, 7:14 am
ಮುಂಬೈ: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಮೋಘ ಶತಕ ಸಿಡಿಸಿದ್ದಾರೆ. 
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು ಈ ಪಂದ್ಯ ವಿರಾಟ್ ಕೊಹ್ಲಿಗೆ 200ನೇ ಏಕದಿನ ಅಂತಾರಾಷ್ಟ್ರೀಯ ಪಂದ್ಯವಾಗಿದೆ. ಕೊಹ್ಲಿ ಶತಕ (121) ಸಿಡಿಸುವ ಮೂಲಕ ಪಂದ್ಯವನ್ನು ಅವಿಸ್ಮರಣೀಯವಾಗಿಸಿಕೊಂಡಿರು. ಇದರೊಂದಿಗೆ ಅವರು 31ನೇ ಶತಕ ಸಿಡಿಸಿಸಿದ್ದು ರಿಕ್ಕಿ ಪಾಂಟಿಂಗ್ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. 
ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ ಅತೀ ವೇಗವಾಗಿ 31ನೇ ಶತಕ ಸಿಡಿಸಿದ ಮೊದಲ ಆಟಗಾರ ಎಂಬ ಖ್ಯಾತಿಗೆ ಕೊಹ್ಲಿ ಭಾಜನರಾಗಿದ್ದಾರೆ. ಟೀಂ ಇಂಡಿಯಾದ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು 49 ಶತಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement