ಮುಂಬೈ: ಮುಂಬರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ಹಾಗೂ ನ್ಯೂಜಿಲೆಂಡ್ ವಿರುದ್ಧದ ಟಿ20 ಕ್ರಿಕೆಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಟೆಸ್ಟ್ ತಂಡಕ್ಕೆ ಮರಳಿದ ಮುರಳಿ ವಿಜಯ್ ವಾಪಸ್ ಆಗಿದ್ದಾರೆ.
ಇದೇ ನವೆಂಬರ್ 1ರಿಂದ ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಟಿ20 ಸರಣಿ ಆರಂಭವಾಗಲಿದ್ದು, ಟಿ20 ತಂಡದಲ್ಲಿ ಕರ್ನಾಟಕದ ಕೆಎಲ್ ರಾಹುಲ್ ಹಾಗೂ ಮನೀಷ್ ಪಾಂಡೆ ಸ್ಥಾನ ಪಡೆದಿದ್ದಾರೆ. ಇನ್ನು ಈ ಹಿಂದೆ ವಿಶ್ರಾಂತಿ ನೀಡಲಾಗಿದ್ದ ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾ ಅವರನ್ನು ಪುನಃ ಟೆಸ್ಟ್ ತಂಡಕ್ಕೆ ವಾಪಸ್ ಕರೆಸಿಕೊಳ್ಳಲಾಗಿದೆ.
ಉಳಿದಂತೆ ನಾಯಕ ಕೊಹ್ಲಿ ಅವರನ್ನು ವಿಶ್ರಾಂತಿ ನೀಡದೇ ಮುಂದುವರೆಸಲಾಗಿದ್ದು, ಶಿಖರ್ ಧವನ್, ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಮನೀಶ್ ಪಾಂಡೆ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ಎಂಎಸ್ ಧೋನಿ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯಾ, ಅಕ್ಸರ್ ಪಟೇಲ್, ಯುಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಭುವನೇಶ್ವರ ಕುಮಾರ್, ಜಸ್ ಪ್ರೀತ್ ಬುಮ್ರಾ, ಆಶಿಶ್ ನೆಹ್ರಾ, ಮೊಹಮ್ಮದ್ ಸಿರಾಜ್ ಅವರನ್ನೊಳಗೊಂಡ 16 ಮಂದಿಯ ತಂಡವನ್ನು ಪ್ರಕಟಿಸಲಾಗಿದೆ.
ಅಂತೆಯೇ ನ್ಯೂಜಿಲೆಂಡ್ ಸರಣಿ ಬಳಿಕ ಭಾರತ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯನ್ನಾಡಲಿದ್ದು, ನವೆಂಬರ್ 16ರಿಂದ 3 ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ. ಈ ಸರಣಿಗೂ ಈಗಲೇ ತಂಡ ಪ್ರಕಟಿಸಲಾಗಿದ್ದು, ತಂಡ ಇಂತಿದೆ.
ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಮುರಳಿ ವಿಜಯ್, ಶಿಖರ್ ಧವನ್, ಚೇತೇಶ್ವರ್ ಪೂಜಾರಾ, ಅಜಿಂಕ್ಯಾ ರಹಾನೆ (ಉಪ ನಾಯಕ), ರೋಹಿತ್ ಶರ್ಮಾ, ವೃದ್ಧಿಮಾನ್ ಸಹಾ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಹಾರ್ದಿಕ್ ಪಾಂಡ್ಯಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಭುವನೇಶ್ವರ ಕುಮಾರ್, ಇಶಾಂತ್ ಶರ್ಮಾ.
ಅಂತೆಯೇ ಭಾರತಕ್ಕೆ ಬರುವ ಶ್ರೀಲಂಕಾ ತಂಡದ ವಿರುದ್ಧದ ಅಭ್ಯಾಸ ಪಂದ್ಯಕ್ಕೂ ತಂಡದ ಆಯ್ಕೆ ಮಾಡಲಾಗಿದ್ದು, ನಮನ್ ಈ ತಂಡದ ಸಾರಥ್ಯ ವಹಿಸಿದ್ದಾರೆ. ಈ ತಂಡ ಇಂತಿದೆ.
ನಮನ್ ಓಜಾ (ನಾಯಕ, ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್, ಜೀವನ್ ಜೋತ್ ಸಿಂಗ್, ಬಿ ಸಂದೀಪ್, ತನ್ಮಯ್ ಅಗರ್ವಾಲ್, ಅಭಿಷೇಕ್ ಗುಪ್ತಾ, ರೋಹನ್ ಪ್ರೇಮ್, ಆಕಾಶ್ ಬಂಡಾರಿ, ಜಲಜ್ ಸಕ್ಸೇನಾ, ಸಿವಿ ಮಿಲಿಂದ್, ಅವೇಶ್ ಖಾನ್, ಸಂದೀಪ್ ವಾರಿಯರ್, ರವಿ ಕಿರಣ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics