ಅನುಷ್ಕಾ ಶರ್ಮಾ-ವಿರಾಟ್ ಕೊಹ್ಲಿ 
ಕ್ರಿಕೆಟ್

ಮದುವೆಗಾಗಿ ಕ್ರಿಕೆಟ್‌ನಿಂದ 'ಬ್ರೇಕ್' ತೆಗೆದುಕೊಳ್ಳುತ್ತಿದ್ದಾರಾ ವಿರಾಟ್ ಕೊಹ್ಲಿ?

ದಾಂಪತ್ಯ ಜೀವನಕ್ಕೆ ಕಾಲಿಡುವ ಸಲುವಾಗಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರು ಡಿಸೆಂಬರ್ ತಿಂಗಳಲ್ಲಿ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ...

ದಾಂಪತ್ಯ ಜೀವನಕ್ಕೆ ಕಾಲಿಡುವ ಸಲುವಾಗಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅವರು ಡಿಸೆಂಬರ್ ತಿಂಗಳಲ್ಲಿ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. 
ಈ ಮಧ್ಯೆ ಟೀಂ ಇಂಡಿಯಾ ಆಯ್ಕೆ ಸಮಿತಿಯ ಮುಖ್ಯಸ್ಥ ಎಂಎಸ್ಕೆ ಪ್ರಸಾದ್ ಅವರು ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಮೂರು  ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ನಾಯಕ ವಿರಾಟ್ ಕೊಹ್ಲಿ ಆಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು. 
ಕೆಲಸದ ಒತ್ತಡವನ್ನು ನಾವು ಗಮನಿಸುತ್ತಿದ್ದೇವೆ. ಐಪಿಎಲ್ ನಿಂದ ಹಿಡಿದು ಇಲ್ಲಿಯವರೆಗೂ ವಿರಾಟ್ ಕೊಹ್ಲಿ ವಿಶ್ರಾಂತಿ ಇಲ್ಲದೆ ಆಡುತ್ತಿದ್ದಾರೆ. ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ ಮುಕ್ತಾಯದ ಬಳಿಕ ಅವರಿಗೆ ವಿಶ್ರಾಂತಿ ನೀಡಲು ನಾವು ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ. 
ನವೆಂಬರ್ 16ರಿಂದ ಕೋಲ್ಕತ್ತಾದಲ್ಲಿ ಶ್ರೀಲಂಕಾ ಮತ್ತು ಭಾರತ ನಡುವಿನ ಮೊದಲ ಟೆಸ್ಟ್ ಪಂದ್ಯ ನಡೆಯಲಿದ್ದು ಹಿನ್ನೆಲೆಯಲ್ಲಿ ಲಂಕಾ ವಿರುದ್ಧದ ಟೆಸ್ಟ್ ಪಂದ್ಯಕ್ಕಾಗಿ ಇಂದು ಮುಂಬೈನಲ್ಲಿ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದ್ದು ಈ ವೇಳೆ ಕೊಹ್ಲಿಗೆ ವಿಶ್ರಾಂತಿ ನೀಡುವ ಕುರಿತು ಹೇಳಿದರು. 
ಆಸಕ್ತಿಕರ ಸಂಗತಿಯೆಂದರೆ ಲಂಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗಾಗಿ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದ್ದು ಮೂರನೇ ಪಂದ್ಯಕ್ಕೆ ಭಾರತ ತಂಡವನ್ನು ಸದ್ಯ ಪ್ರಕಟಿಸಿಲ್ಲ. ಮೂರನೇ ಟೆಸ್ಟ್ ಪಂದ್ಯ ಡಿಸೆಂಬರ್ 2ರಿಂದ ಪ್ರಾರಂಭವಾಗಲಿದ್ದು ಕೊಹ್ಲಿಗೆ ವಿಶ್ರಾಂತಿ ನೀಡುವ ಸಲುವಾಗಿಯೇ ಮೂರನೇ ಟೆಸ್ಟ್ ಪಂದ್ಯಕ್ಕೆ ತಂಡವನ್ನು ಪ್ರಕಟಿಸಿಲ್ಲ ಎಂಬ ಮಾತುಗಳು ಕೇಳಿಬರುತ್ತಿವೆ. 
ಡಿಸೆಂಬರ್ ತಿಂಗಳಲ್ಲಿ ವಿಶ್ರಾಂತಿ ತೆಗೆದುಕೊಂಡು ವಿರಾಟ್ ಕೊಹ್ಲಿ ಬಾಲಿವುಡ್ ನಟಿ ಅನುಷ್ಕಾ ಶರ್ಮಾರ ಜತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂಬ ಪ್ರಶ್ನೆ ಮೂಡಿದ್ದು ಈ ಸಂಗತಿ ಇದೀಗ ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!